ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

‘ಕೈ’ ಕಾರ್ಯಕರ್ತನ ಮೇಲೆ ಹಲ್ಲೆ: ಕಮೀಷನರ್ ಅಮಾನತಿಗೆ ಕಾಂಗ್ರೆಸ್ ಒತ್ತಾಯ

ಬೆಂಗಳೂರು: ಕಲಬುರಗಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಪೊಲೀಸ್ ಕಮೀಷನರ್ ನಡೆಸಿದ ಹಲ್ಲೆಯನ್ನು ಖಂಡಿಸಿ ಕಮೀಷನರ್ ನನ್ನು ಅಮಾನತ್ತು ಮಾಡುವಂತೆ ಕಾಂಗ್ರೆಸ್ ಒತ್ತಾಯಿಸಿದೆ. ಹೌದು ಕಲಬುರಗಿ ನಗರದ ಹಫ್ತ್ ಗುಂಬಜ್ ಬಳಿ ಪೊಲೀಸ್ ಕಮಿಷನರ್ ಡಾ.ವೈ.ಎಸ್. ರವಿಕುಮಾರ್ ಮನಬಂದಂತೆ ಕಾಂಗ್ರೆಸ್ ಕಾರ್ಯಕರ್ತನನ್ನು ಥಳಿಸಿದ್ದು, ಕೂಡಲೇ ಅವರನ್ನು ಅಮಾನತು ಮಾಡಬೇಕೆಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಈ ವಿಚಾರವಾಗಿ ಟ್ವೀಟ್ ಮಾಡಿದ ಅವರು, ಯಾವುದೇ ತಪ್ಪು ಮಾಡದಿದ್ದರೂ ಕಾರ್ಯಕರ್ತನಿಗೆ ಹೀಗೆ ಥಳಿಸಿದ್ದು ಖಂಡನೀಯ, ಕಮೀಷನರ್ ಅಮಾನತು ಮಾಡುವ ಮೂಲಕ ಕಾರ್ಯಕರ್ತನಿಗೆ ನ್ಯಾಯ ಒದಗಿಸಬೇಕು ಎಂದಿದ್ದಾರೆ.ಇದೇ ವಿಚಾರಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ ಮಾತನಾಡಿ ಪೊಲೀಸ್ ಆಯುಕ್ತರ ಅಧಿಕಾರ ದುರ್ಬಳಕೆ ಅತ್ಯಂತ ಖಂಡನೀಯ. ಪೊಲೀಸ್ ಆಯುಕ್ತರ ವಿರುದ್ಧ ಪ್ರಕರಣ ದಾಖಲಿಸಬೇಕು ಮತ್ತು ಆತನನ್ನು ತಕ್ಷಣ ಅಮಾನತು ಮಾಡಲು ಆದೇಶಿಸಬೇಕು ಎಂದು ಆಗ್ರಹಿಸಿದ್ದಾರೆ.

Edited By : Nirmala Aralikatti
PublicNext

PublicNext

02/09/2021 04:04 pm

Cinque Terre

81.13 K

Cinque Terre

3

ಸಂಬಂಧಿತ ಸುದ್ದಿ