ಬೆಂಗಳೂರು: ರಾಜಧಾನಿಯಲ್ಲಿ ನೈತಿಕ ಪೊಲೀಸ್‌ಗಿರಿ ಮಾದರಿಯಲ್ಲಿ ಘಟನೆ ನಡೆದಿದೆ. ಬುರ್ಖಾ ಧರಿಸಿದ ಮಹಿಳೆ ಜತೆ ಪ್ರಯಾಣಿಸುತ್ತಿದ್ದ ಬೈಕ್ ಸವಾರನ ಮೇಲೆ ಇಬ್ಬರು ದುಷ್ಕರ್ಮಿಗಳು ಹಲ್ಲೆ ಮಾಡಿ ಅವಾಚ್ಯ ಪದಗಳಿಂದ ನಿಂದಿಸಿದ್ದರು. ಹಾಗೂ ನಿಂದನೆ ಮತ್ತು ಹಲ್ಲೆ ಪ್ರಕರಣದ ಆರೋಪಿಗಳನ್ನು ಬಂಧಿಸಲಾಗಿದೆ.
ಹಲ್ಲೆ ವಿಡಿಯೋ ವೈರಲ್ ಆದ 12 ಗಂಟೆಯಲ್ಲೇ ಬೆಂಗಳೂರಿನ ಸುದ್ದಗುಂಟೆಪಾಳ್ಯ ಪೊಲೀಸರು ಹಲ್ಲೆ ನಡೆಸಿದ ಆರೋಪಿಗಳನ್ನು ಅರೆಸ್ಟ್ ಮಾಡಿದ್ದು, ಇದಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ಅಭಿನಂದನೆ ತಿಳಿಸಿದ್ದಾರೆ.
ಪತ್ರಿಕಾ ಪ್ರಕಣೆ ಮೂಲಕ ಬೆಂಗಳೂರು ನಗರ ಪೊಲೀಸರಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಅಭಿನಂದನೆ ತಿಳಿಸಿದ್ದು, ಜಾಗತಿಕ ನಗರ ಬೆಂಗಳೂರು, ಸರ್ವ ಜನಾಂಗದ ಶಾಂತಿಯ ತೋಟವಾಗಿದ್ದು, ಅದರ ಖ್ಯಾತಿಯನ್ನು ಉಳಿಸಲು ಸರಕಾರ, ಬದ್ಧವಾಗಿದೆ, ಯಾರೇ ಆದರೂ ಕಾನೂನನ್ನು ಕೈಗೆ ತೆಗೆದುಕೊಳ್ಳುವುದನ್ನು, ಸಹಿಸಲಾಗುವುದಿಲ್ಲ ಎಂದಿದ್ದಾರೆ.
PublicNext
20/09/2021 08:02 am