ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರೈತರ ಮೇಲೆ ಹರಿದ ವಾಹನ: 8 ಜನರ ಬಲಿ- ಕೇಂದ್ರ ಸಚಿವರ ಪುತ್ರ ಸೇರಿ 14 ಜನರ ವಿರುದ್ಧ ಎಫ್‌ಐಆರ್

ಲಕ್ನೋ: ಉತ್ತರ ಪ್ರದೇಶ ಉಪ ಮುಖ್ಯಮಂತ್ರಿ ಕೇಶವ ಪ್ರಸಾದ್‌ ಮೌರ್ಯ ಅವರ ಭೇಟಿಯ ವಿರುದ್ಧ ರೈತರು ನಡೆಸುತ್ತಿದ್ದ ಪ್ರತಿಭಟನೆ ಸಂದರ್ಭದಲ್ಲಿ ನಡೆದ ಹಿಂಸಾಚಾರದಲ್ಲಿ ಎಂಟು ಮಂದಿ ಮೃತಪಟ್ಟಿದ್ದಾರೆ. ಈ ಪ್ರಕರಣ ಸಂಬಂಧ ಇದೀಗ ಕೇಂದ್ರ ಸಚಿವರ ಪುತ್ರ ಸೇರಿದಂತೆ 14 ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಉತ್ತರ ಪ್ರದೇಶದ ಲಖಿಂಪುರ್ ಖೇರಿ ಜಿಲ್ಲೆಯಲ್ಲಿ ಹಿಂಸಾಚಾರ ಭುಗಿಲೆದ್ದಿದ್ದು, ಉಪಮುಖ್ಯಮಂತ್ರಿ ಕೇಶವ ಮೌರ್ಯ ಮತ್ತು ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಭೇಟಿಗಾಗಿ ರೈತರು ಭಾನುವಾರ ಬೆಳಿಗ್ಗೆಯಿಂದ ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ರೈತರ ಮೇಲೆ ಸಚಿವರ ಬೆಂಗಾವಲು ವಾಹನ ಹರಿದು ನಾಲ್ವರು ರೈತರು ಸಾವಿಗೀಡಾಗಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿರುವ ಲಖಿಂಪುರ್‌–ಖೇರಿ ಜಿಲ್ಲಾಧಿಕಾರಿ ಅರವಿಂದ ಕುಮಾರ್‌ ಚೌರಾಸಿಯಾ, "ಕೇಂದ್ರ ಗೃಹ ಖಾತೆಯ ರಾಜ್ಯ ಸಚಿವ ಅಜಯ್ ಮಿಶ್ರಾ ಅವರ ಬೆಂಗಾವಲು ಪಡೆಯ ಎರಡು ಎಸ್‌ಯುವಿಗಳು ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಹರಿಯಿತು. ಇದರಿಂದ ನಾಲ್ವರು ರೈತರು ಬಲಿಯಾದರು. ಆಕ್ರೋಶಗೊಂಡ ರೈತರು ಎರಡೂ ಎಸ್‌ಯುವಿಗಳನ್ನು ತಡೆದು ನಿಲ್ಲಿಸಿ, ಅವುಗಳಿಗೆ ಬೆಂಕಿ ಹಚ್ಚಿದರು. ಈ ಎಸ್‌ಯುವಿಗಳಲ್ಲಿ ಇದ್ದವರಲ್ಲಿ ನಾಲ್ವರು ಮೃತಪಟ್ಟಿದ್ದಾರೆ" ಎಂದು ತಿಳಿಸಿದ್ದಾರೆ.

Edited By : Vijay Kumar
PublicNext

PublicNext

04/10/2021 08:53 am

Cinque Terre

85.62 K

Cinque Terre

9