ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಲಖಿಂಪುರ ಖೇರಿ ಹತ್ಯೆ, ಹಿಂಸಾಚಾರ ಕೇಸ್; ಕೇಂದ್ರ ಸಚಿವರ ಮಗ ಆಶಿಶ್ ಮಿಶ್ರಾ ಅರೆಸ್ಟ್

ಲಕ್ನೋ: ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ನಡೆದ ಹತ್ಯೆ ಮತ್ತು ಹಿಂಸಾಚಾರ ಪ್ರಕರಣದ ಸಂಬಂಧ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಮಗ ಆಶಿಶ್ ಮಿಶ್ರಾ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ರೈತರ ಮೇಲೆ ಹರಿದ ಎರಡು ಎಸ್​ಯುವಿಗಳಲ್ಲಿ ಒಂದು ಕಾರನ್ನು ಚಲಾಯಿಸುತ್ತಿದದ್ದು ಕೇಂದ್ರ ಗೃಹ ಸಚಿವಾಲಯದ ರಾಜ್ಯ ಸಚಿವ ಅಜಯ್ ಮಿಶ್ರಾ ಅವರ ಮಗ ಆಶಿಶ್ ಮಿಶ್ರಾ ಎಂಬ ಆರೋಪ ಕೇಳಿಬಂದಿತ್ತು. ಈ ಘಟನೆ ನಡೆದು ವಾರಗಳೇ ಕಳೆದರೂ ಆಶಿಶ್ ಮಿಶ್ರಾ ವಿಚಾರಣೆಗೆ ಹಾಜರಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ನೋಟಿಸ್ ನೀಡಿದ್ದ ಪೊಲೀಸರು ಇಂದು ಬೆಳಗ್ಗೆಯಿಂದ ಆಶಿಶ್ ಮಿಶ್ರಾ ಅವರ ವಿಚಾರಣೆ ನಡೆಸಿದ್ದು, ಹತ್ಯೆ ವೇಳೆ ಚಿತ್ರೀಕರಿಸಲಾದ ವಿಡಿಯೋದಲ್ಲಿದ್ದ ಒಂದು ಎಸ್​ಯುವಿಯನ್ನು ಆಶಿಶ್ ಮಿಶ್ರಾ ಚಲಾಯಿಸುತ್ತಿದ್ದರು ಎಂಬುದು ಖಚಿತವಾಗಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಎಸ್​ಐಟಿ ಪೊಲೀಸರು ಬಂಧಿಸಿದ್ದಾರೆ.

ಕಳೆದ ಭಾನುವಾರ ರಾತ್ರಿ ಲಖಿಂಪುರ ಖೇರಿಯ ಟಿಕೂನಿಯಾ ಎಂಬಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮಕ್ಕೆ ಉತ್ತರ ಪ್ರದೇಶದ ಉಪ ಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರು ಮುಖ್ಯ ಅತಿಥಿಯಾಗಿ ಆಗಮಿಸಬೇಕಿತ್ತು. ಆದರೆ ಕೃಷಿ ಕಾಯ್ದೆ ವಿರೋಧಿಸಿ ರೈತರು ಒಟ್ಟುಗೂಡಿ ಪ್ರತಿಭಟನೆ ನಡೆಸುವ ಮೂಲಕ ಕಾರನ್ನು ತಡೆದಿದ್ದರು. ಈ ವೇಳೆ ಎರಡು ಕಾರು ಅವರ ಮೇಲೆ ಹರಿದು ನಾಲ್ವರು ರೈತರು ಮೃತಪಟ್ಟಿದ್ದರು. ಈ ಘಟನೆಯಿಂದ ಹಿಂಸಾಚಾರ ನಡೆದಿದ್ದು, ಇಲ್ಲಿಯವರೆಗೆ 8 ಮಂದಿ ಸಾವನ್ನಪ್ಪಿದ್ದಾರೆ.

Edited By : Vijay Kumar
PublicNext

PublicNext

09/10/2021 10:15 pm

Cinque Terre

100.9 K

Cinque Terre

8

ಸಂಬಂಧಿತ ಸುದ್ದಿ