ವಿಜಯಪುರ: ಬಿಜೆಪಿಯ ರೆಬೆಲ್ ಶಾಸಕ ಎಂದೇ ಹೆಸರಾಗಿರುವ ಬಸನಗೌಡ ಪಾಟೀಲ್ ಯತ್ನಾಳ್ ಅವರ ಭಾವಚಿತ್ರ ಇರುವ ಪೋಸ್ಟ್ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
ಹಿಂದೂ ಹುಲಿಯ ಸಿ.ಡಿ ಬಿಡುಗಡೆಗೆ ಕ್ಷಣಗಣನೆ, ಭರ್ಜರಿ ಯಶಸ್ಸು ಕಾಣಲಿ ಎಂಬ ಟ್ಯಾಗ್ ಲೈನ್ ಮೂಲಕ ಯತ್ನಾಳ್ ಅವರು ಮಲಗಿರುವ ಭಂಗಿಯ ಫೋಟೋ ಹಾಕಲಾಗಿದೆ.
'ನಮ್ಮ ಕಾಂಗ್ರೆಸ್' ಹೆಸರಿನ ಇನ್ಸ್ಟಾಗ್ರಾಮ್ ಪೇಜ್ ನಲ್ಲಿ ಹಾಗೂ 'ಜೆಡಿಎಸ್ ಮಿಷನ್ 2023 ಎಂಬ ಫೇಸ್ ಬುಕ್ ಪೇಜ್ ನಲ್ಲಿ ಈ ಪೋಸ್ಟ್ ಹಾಕಲಾಗಿದೆ. ಈ ಬಗ್ಗೆ ವಿಜಯಪುರದ ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರದ ನಾಮನಿರ್ದೇಶಿತ ಸದಸ್ಯ ಲಕ್ಷ್ಮಣ ಜಾಧವ್ ಅವರು ದೂರು ದಾಖಲಿಸಿದ್ದಾರೆ. ಈ ಅವಹೇಳನಕಾರಿ ಪೋಸ್ಟ್ ಹಾಕಿದವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಅವರು ಒತ್ತಾಯಿಸಿದ್ದಾರೆ.
PublicNext
14/10/2021 10:26 am