ವಿಜಯಪುರ: ಬಿಜೆಪಿ ಕಾರ್ಯಕರ್ತನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಘಟನೆ ಸಿಂದಗಿ ತಾಲೂಕಿನ ನಾಗಾಂವಿ ಬಿ.ಕೆ ಗ್ರಾಮದಲ್ಲಿ ಮಂಗಳವಾರ ಬೆಳಿಗ್ಗೆ ನಡೆದಿದೆ,
ಹಲ್ಲೆಗೊಳ್ಳಗಾದ ಗುರಣ್ಣ ಸಿದ್ದನಗೌಡ ಬಿರಾದಾರ (30) ಅವರನ್ನು ಸಿಂದಗಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಿಂದಗಿ ಉಪಚುನಾವಣೆ ಹಿನ್ನೆಲೆಯಲ್ಲಿ ಈ ಕೃತ್ಯ ನಡೆದಿದೆ ಎನ್ನಲಾಗಿದೆ.
ಗುರಣ್ಣ ಅವರು ಇಂದು ಬೆಳಿಗ್ಗೆ ಹೊಲದಲ್ಲಿ ಬೆಳೆಗಳಿಗೆ ನೀರು ಬಿಡಲು ಹೋಗಿದ್ದರು. ಈ ವೇಳೆ ದುಷ್ಕರ್ಮಿಗಳು ಗುರಣ್ಣನ ಮುಖಕ್ಕೆ ಬಟ್ಟೆ ಕಟ್ಟಿ ಕುತ್ತಿಗೆ, ಕಾಲಿಗೆ ಚಾಕುವಿನಿಂದ ಇರಿದಿದ್ದಾರೆ. 'ಹಲ್ಲೆ ನಡೆಸಿದ ಇಬ್ಬರು ವ್ಯಕ್ತಿಗಳು ಮುಖ ಮುಚ್ಚಿಕೊಂಡಿದ್ದರು. ಏನನ್ನು ಮಾತನಾಡದೇ ಹಲ್ಲೆ ನಡೆಸಿದ್ದಾರೆ' ಎಂದು ಗಾಯಾಳು ಗುರಣ್ಣ ಆರೋಪಿಸಿದ್ದಾರೆ.
PublicNext
02/11/2021 01:18 pm