ಮುಂಬೈ: ಅಕ್ರಮ ಹಣ ವರ್ಗಾವಣೆ ಕೇಸ್‌ನ ಅಡಿ ಜಾರಿ ನಿರ್ದೇಶನಾಲಯ ಸುಳಿಯಲ್ಲಿ ಸಿಲುಕಿರುವ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶ್‌ಮುಖ್ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಅನಿಲ್ ದೇಶಮುಖ್ ಅವರನ್ನು ಜಾರಿ ನಿರ್ದೇಶನಾಲಯ(ಇ.ಡಿ) ಬಂಧಿಸಿದೆ. ನಂತರ ದೇಶಮುಖ್ ಅವರನ್ನು ನವೆಂಬರ್ 6ರವರೆಗೆ ಇ.ಡಿ ಕಸ್ಟಡಿಗೆ ಕಳುಹಿಸಲಾಯಿತು. ಶನಿವಾರ ದೇಶಮುಖ್ ಅವರನ್ನು ವಿಶೇಷ ರಜಾ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ವಿಚಾರಣೆಯ ಸಂದರ್ಭದಲ್ಲಿ, ಇ.ಡಿ ತನ್ನ ಕಸ್ಟಡಿಗೆ ಕೋರಿತ್ತು. ಆದರೆ ನ್ಯಾಯಾಲಯ ಇದನ್ನು ನಿರಾಕರಿಸಿ, ನ್ಯಾಯಾಂಗ ಬಂಧನಕ್ಕೆ ಆದೇಶ ನೀಡಿದೆ.
PublicNext
07/11/2021 08:02 am