ಲಕ್ನೋ: ಬಿಜೆಪಿ ಕಾರ್ಯಕರ್ತನ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ ಘಟನೆ ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆದಿದೆ.
ಬಿಜೆಪಿ ಕಾರ್ಯಕರ್ತ ಅಜಯ್ ಶರ್ಮಾ ಅವರ ಹೊಟ್ಟೆ ಹಾಗೂ ಭುಜಕ್ಕೆ ಗುಂಡು ತಗುಲಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಅಜಯ್ ಶರ್ಮಾ ಅವರ ಪ್ರಯಾಗ್‌ರಾಜ್‌ನ ಮನೆಗೆ ಇಂದು ಬೆಳಗ್ಗೆ ನುಗ್ಗಿದ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಅದೃಷ್ಟವಶಾತ್ ಅಜಯ್ ಶರ್ಮಾ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪ್ರಯಾಗ್‌ರಾಜ್ ಪೊಲೀಸರು, ಆರೋಪಿಗಳಿಗೆ ಬಲೆ ಬೀಸಿದ್ದಾರೆ.
PublicNext
09/11/2021 04:12 pm