ಕಲಬುರಗಿ: ಬಿಟ್ ಕಾಯಿನ್ ಪ್ರಕರಣ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನು ಖಂಡಿತವಾಗಿ ಬಲಿ ಪಡೆಯಲಿದೆ ಎಂದು ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಕಲಬುರಗಿ ಕಾಂಗ್ರೆಸ್ ಕಚೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಬಾರಿಯ ಸಹ ಬಿಜೆಪಿಯಲ್ಲಿ ಮೂರು ಜನ ಸಿಎಂ ಆಗುತ್ತಾರೆ ಎಂದು ಭವಿಷ್ಯ ನುಡಿದಿದ್ದಾರೆ. ಇದು ನೂರು-ಇನ್ನೂರು ಕೋಟಿಯ ಕೇಸ್ ಅಲ್ಲ. ಅದಕ್ಕಿಂತಲೂ ದೊಡ್ಡ ಮೊತ್ತದ ಹಗರಣ. ಬಿಜೆಪಿಯ ರಾಜಕಾರಣಿಗಳು ಬಿಟ್ ಕಾಯಿನ್ ದಂಧೆಯಲ್ಲಿ ಶಾಮೀಲಾಗಿದ್ದಾರೆ. ಇತರ ಯಾವುದೇ ಪಕ್ಷದವರು ಈ ಹಗರಣದಲ್ಲಿ ಭಾಗಿಯಾಗಿದ್ರೆ ತನಿಖೆ ಮಾಡಲಿ. ಆಗ ಎಲ್ಲ ಸತ್ಯಾಸತ್ಯತೆ ತಿಳಿಯಲಿದೆ. ಬರೀ ಬಾಯಿ ಮಾತಲ್ಲೇ ತನಿಖೆಗೆ ಆದೇಶ ಮಾಡೀವಿ ಅಂತಾರೆ. ಆದರೆ ತನಿಖೆಗೆ ಆದೇಶ ನೀಡಲು ಹಿಂದೇಟು ಹಾಕುತ್ತಿದ್ದಾರೆ. ಸದ್ಯ ರಾಜ್ಯದಲ್ಲಿ ಬಿಟ್‌ಕಾಯಿನ್, ಕರೆನ್ಸಿ ಸೇರಿದಂತೆ ಹಲವು ಅಕ್ರಮ ದಂಧೆಗಳು ಬಿಂದಾಸಾಗಿ ನಡೆಯುತ್ತಿವೆ. ಇದರಲ್ಲಿ ಸಾವಿರಾರು ಕೋಟಿ ರೂಪಾಯಿಯ ವ್ಯವಹಾರ ಈಗಾಗಲೇ ಆಗಿದೆ. ಅಧಿಕಾರಿಗಳು ಹಾಗೂ ಪ್ರಭಾವಿ ನಾಯಕರು ಸಪೋರ್ಟ್‌ನಿಂದ ನಡೆಯುತ್ತಿದೆ ಎಂದು ಪ್ರಿಯಾಂಕ್ ಖರ್ಗೆ ಒತ್ತಾಯಿಸಿದ್ದಾರೆ.
PublicNext
10/11/2021 02:14 pm