ಬೆಂಗಳೂರು: ಬಿಟ್ ಕಾಯಿನ್ ಹಗರಣ ಕ್ಷಣ ಕ್ಷಣಕ್ಕೂ ಕುತೂಹಲ ಕೆರಳಿಸುತ್ತಿದೆ. ಬಿಟ್ ಕಾಯಿನ್ ಹಗರಣದಲ್ಲಿ ರಾಜಕಾರಣಿಗಳು ಇದ್ದಾರೆ ಎಂಬ ಶಂಕೆ ವ್ಯಕ್ತವಾಗುತ್ತಿರುವ ಬೆನ್ನಲ್ಲೆ ಅನಾಮಧೇಯ ಪತ್ರವೊಂದು ಪ್ರಧಾನಮಂತ್ರಿಗಳ ಕಚೇರಿ ತಲುಪಿದೆ. ಬೆಂಗಳೂರು ಸೇರಿದಂತೆ ಅಂತಾರಾಷ್ಟ್ರೀಯ ವಂಚಕ ಗ್ಯಾಂಗ್ ಜೊತೆಗೆ ಸರ್ಕಾರದ ಆಡಳಿತ ಯಂತ್ರದ ಮತ್ತು ರಾಜಕಾರಣಿಗಳು ಭಾಗಿಯಾಗಿದ್ದಾರೆ ಎಂದುಪತ್ರದಲ್ಲಿ ಉಲ್ಲೇಖಿಸಲಾಗಿದೆ.
ರಾಜ್ಯದ ಕೆಲವು ಪ್ರಮುಖ ರಾಜಕಾರಣಿಗಳ ವಿರುದ್ಧ ವ್ಯಾಪಕವಾದ ಆರೋಪಗಳನ್ನು ಮಾಡಿದ್ದು ಸಹಿ ಇಲ್ಲದ ಪತ್ರದಲ್ಲಿ, ಪ್ರಧಾನಿ ಕಾರ್ಯಾಲಯ, ರಾಷ್ಟ್ರೀಯ ಭದ್ರತಾ ಸಲಹೆಗಾರ, ಜಾರಿ ನಿರ್ದೇಶನಾಲಯ ಮತ್ತು ಗುಪ್ತಚರ ಬ್ಯೂರೋ, ಗೆ ವಿಳಾಸ ಹಾಕಲಾಗಿದೆ.
ಕಳೆದ ವರ್ಷ ಡ್ರಗ್ಸ್ ಪ್ರಕರಣದಲ್ಲಿ ಸಿಸಿಬಿಯಿಂದ ಬಂಧನಕ್ಕೊಳಗಾದ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ ನಡೆಸಿದ ಭ್ರಷ್ಟಾಚಾರ ಮತ್ತು ಬಿಟ್ಕಾಯಿನ್ ಹಗರಣದಲ್ಲಿ ಕೆಲವು ಹಿರಿಯ ಐಪಿಎಸ್ ಅಧಿಕಾರಿಗಳು ಸೇರಿದಂತೆ ಪೊಲೀಸ್ ಅಧಿಕಾರಿಗಳು ಭಾಗಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ.
PublicNext
11/11/2021 10:05 pm