ಬೆಂಗಳೂರು: ಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲಿ ನಡೆಯುತ್ತಿರುವ ಹಗರಣಗಳ ಬಗ್ಗೆ ತನಿಖೆಗೆ ಸಮಿತಿ ರಚಿಸುವಂತೆ ಒತ್ತಾಯಿಸಿ ವಿಪಕ್ಷ ನಾಯಕ ಸಿದ್ದರಾಮಯ್ಯ, ಸಿಎಂ ಬಸವರಾಜ ಬೊಮ್ಮಾಯಿಗೆ ಮಾಜಿ ಪತ್ರ ಬರೆದಿದ್ದಾರೆ.
ನಾಡಿನ ಎಲ್ಲ ವಿಶ್ವವಿದ್ಯಾಲಯಗಳು ಪ್ರಮುಖವಾಗಿ ವಿದ್ಯಾರ್ಥಿಗಳಿಗೆ ಜ್ಞಾನವನ್ನು ಕಲಿಸುವ ಕೆಲಸ ಮಾಡುತ್ತವೆ ಆದರೆ ಹಂಪಿಯಲ್ಲಿರುವ ಈ ವಿಶ್ವ ವಿದ್ಯಾಲಯವನ್ನು “ಜ್ಞಾನ ಸೃಷ್ಟಿಯ” ಕೆಲಸ ಮಾಡುವ ವಿಶಿಷ್ಟ ಉದ್ದೇಶದಿಂದ ಸ್ಥಾಪಿಸಲಾಗಿದೆ.
ದೇಶದ ವಿಶ್ವವಿದ್ಯಾಲಯಗಳಲ್ಲಿ ಸಂಶೋಧನೆಯ ಗುಣಮಟ್ಟ ಕುಸಿದು ಹೋಗುತ್ತಿದೆ ಎಂಬ ಗಂಭೀರ ಆರೋಪ ವಿದ್ವತ್ ವಲಯದಲ್ಲಿ ಕೇಳಿ ಬರುತ್ತಿದೆ. ಇದಕ್ಕೆ ಅಪವಾದವೆಂಬಂತೆ ಕನ್ನಡ ವಿಶ್ವವಿದ್ಯಾಲಯವು ಮೌಲ್ಯಯುತ ಸಂಶೋಧನಾ ಕೆಲಸಗಳನ್ನು ಮಾಡುತ್ತಿದೆ. ಹಂಪಿಯ ಕನ್ನಡ ವಿಶ್ವ ವಿದ್ಯಾಲಯವೂ ಸೇರಿದಂತೆ ನಾಡಿನ ಎಲ್ಲ ವಿಶ್ವ ವಿದ್ಯಾಲಯಗಳಲ್ಲಿ ಗುಣಮಟ್ಟದ ನೇಮಕಾತಿಗಳು ನಡೆಯದ ಕಾರಣದಿಂದ ಉತ್ತಮ ವಿದ್ವಾಂಸರುಗಳು, ಬೋಧಕರು ಲಭ್ಯವಾಗುತ್ತಿಲ್ಲ. ಉನ್ನತ ಶಿಕ್ಷಣವು ತನ್ನ ಗುಣಮಟ್ಟವನ್ನು ಕಳೆದುಕೊಂಡರೆ, ನಾಡಿನ ಸಮಸ್ತ ವಿಭಾಗಗಳೂ ಕುಸಿದು ಬೀಳುತ್ತವೆ ಎಂದು ಆರೋಪಿಸಿದ್ದಾರೆ. ಈ ಬಗ್ಗೆ ಸಮಗ್ರ ತನಿಖೆ ನಡೆಸಲು ಸಮಿತಿ ರಚಿಸಬೇಕು ಎಂದು ಸಿದ್ದರಾಮಯ್ಯ ಪತ್ರದ ಮುಖೇನ ಮುಖ್ಯಮಂತ್ರಿಗಳನ್ನು ಒತ್ತಾಯಿಸಿದ್ದಾರೆ.
PublicNext
25/11/2021 11:00 pm