ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೊಲ್ಹಾಪುರದಲ್ಲಿ ಕನ್ನಡ ಧ್ವಜಕ್ಕೆ ಬೆಂಕಿ ಹಚ್ಚಿದ ಕಾಂಗ್ರೆಸ್ ಕಾರ್ಯಕರ್ತರು

ಕೊಲ್ಹಾಪುರ: ಮಹಾರಾಷ್ಟ್ರದಲ್ಲಿ ಶಿವಸೇನೆ ಪುಂಡರ ಪುಂಡಾಟಿಕೆಗೆ ಕಾಂಗ್ರೆಸ್ ಕಾರ್ಯಕರ್ತರು ಸಾಥ್ ನೀಡಿದ್ದಾರೆ. ಕೊಲ್ಹಾಪುರದಲ್ಲಿ ಶಿವಸೇನೆ ಕಾರ್ಯಕರ್ತರು ಕನ್ನಡ ಧ್ವಜಕ್ಕೆ ಬೆಂಕಿ ಹಚ್ಚುವಾಗ ಕಾಂಗ್ರೆಸ್ ಕಾರ್ಯಕರ್ತರು ಅದಕ್ಕೆ ಸಾಥ್ ನೀಡಿದ್ದಾರೆ. ಹಾಗೂ ಕರ್ನಾಟಕ ರಾಜ್ಯ ಹಾಗೂ ಕರ್ನಾಟಕ ಸರ್ಕಾರದ ವಿರುದ್ಧ ಘೋಷಣೆ ಕೂಗಿದ್ದಾರೆ.

ಕೊಲ್ಹಾಪುರದಲ್ಲಿ ನಡೆದ ಪ್ರತಿಭಟನೆ ವೇಳೆ ಶಿವಸೇನೆ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಕನ್ನಡ ಬಾವುಟ ಮೇಲೆ‌ ನಾಯಿ ಕೂರಿಸಿ, ಚಪ್ಪಲಿ ಇಟ್ಟು ಅವಮಾನ ಮಾಡಿದ್ದಲ್ಲದೇ ಬೆಂಕಿ ಹಚ್ಚಿದ್ದಾರೆ. ಬೆಂಗಳೂರಿನಲ್ಲಿ ಶಿವಾಜಿ ಪ್ರತಿಮೆಗೆ ಅಪಮಾನ ಮಾಡಿದ್ದನ್ನು ಖಂಡಿಸಿ ಪ್ರತಿಭಟನೆ ಮಾಡುವ ವೇಳೆ ಶಿವಸೇನೆ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಈ ಮಟ್ಟಿಗೆ ವಿಕೃತಿ ಮೆರೆದಿದ್ದಾರೆ.

Edited By : Nagesh Gaonkar
PublicNext

PublicNext

18/12/2021 07:48 pm

Cinque Terre

107.39 K

Cinque Terre

17

ಸಂಬಂಧಿತ ಸುದ್ದಿ