ಬೆಂಗಳೂರು: ಮೇಕೆದಾಟು ಯೋಜನೆಗಾಗಿ ಒತ್ತಾಯಿಸಿ ಪಾದಯಾತ್ರೆ ಹಮ್ಮಿಕೊಂಡಿರುವ ಕಾಂಗ್ರೆಸ್ ನಾಯಕರ ಮೇಲೆ ಎಫ್‌ಐಆರ್ ದಾಖಲಾಗಿದೆ.
ಕೋವಿಡ್ ನಿಯಮಗಳ ಉಲ್ಲಂಘನೆ ಹಿನ್ನೆಲೆಯಲ್ಲಿ ಎಫ್‌ಐಆರ್ ದಾಖಲಿಸಲಾಗುದೆ. ನಿನ್ನೆ ಭಾನುವಾರ ರಾಮನಗರ ಜಿಲ್ಲೆಯ ಕಾವೇರಿ-ಅರ್ಕಾವತಿ ಸಂಗಮ ಸ್ಥಳದಲ್ಲಿ ಪಾದಯಾತ್ರೆ ಆರಂಭಕ್ಕೂ ಮುನ್ನ ಬೃಹತ್ ವೇದಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಈ ಕಾರ್ಯಕ್ರಮದಲ್ಲಿ ಮಾಸ್ಕ್ ಇಲ್ಲದೇ ಸಾಮಾಜಿಕ ಅಂತರವೂ ಇಲ್ಲದೇ ಸಾವಿರಾರು ಜನರನ್ನು ಸೇರಿಸಲಾಗಿತ್ತು. ಕರ್ನಾಟಕ ಸಾಂಕ್ರಾಮಿಕ ರೋಗಗಳ ಅಧಿನನಿಯಮ 2020 ಕಲಂ5 (3 ಎ) ಉಲ್ಲಂಘಿಸಿದ ಅನ್ವಯ ಈ ಎಫ್‌ಐಆರ್ ದಾಖಲಾಗಿದೆ.
ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಮಾಜಿ ಸಚಿವೆ ಉಮಾಶ್ರೀ, ನಟ ದುನಿಯಾ ವಿಜಯ್, ಸಂಗೀತ ನಿರ್ದೇಶಕ ಸಾಧುಕೋಕಿಲ ಒಟ್ಟು 31 ಜನರ ಮೇಲೆ ಎಫ್‌ಐಆರ್ ದಾಖಲಾಗಿದೆ.
ತಹಶೀಲ್ದಾರ್ ವಿಶ್ವನಾಥ್ ಅವರು ನೀಡಿದ ದೂರಿನನ್ವಯ ಸಾತನೂರು ಠಾಣೆ ಪಿಎಸ್‌ಐ ರವಿಕುಮಾರ್. ಸಿ ಅವರು ಎಫ್‌ಐಆರ್ ದಾಖಲಿಸಿದ್ದಾರೆ.
PublicNext
10/01/2022 04:18 pm