ಬೆಂಗಳೂರು: ಅಪರಾಧ ಕೃತ್ಯಗಳಲ್ಲಿ ಭಾಗಿ ಆಗುವ ಹಾಗೂ ಅಪರಾಧಿಗಳೊಂದಿಗೆ ಕೈ ಜೋಡಿಸುವ ಪೊಲೀಸ್ ಸಿಬ್ಬಂದಿ ವಿರುದ್ಧ ಮುಲಾಜಿಲ್ಲದೇ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರು ನಗರದ ಚಾಮರಾಜಪೇಟೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ‘ಮುಖ್ಯಮಂತ್ರಿ ನಿವಾಸದ ಬಳಿ ಭದ್ರತೆಗೆ ನಿಯೋಜಿತರಾಗಿದ್ದ ಇಬ್ಬರು ಪೊಲೀಸ್ ಸಿಬ್ಬಂದಿ ಗಾಂಜಾ ಮಾರಾಟ ಜಾಲದೊಂದಿಗೆ ಸಂಪರ್ಕ ಹೊಂದಿದ್ದರು ಎನ್ನಲಾದ ವಿಷಯಕ್ಕೆ ಸಂಬಂಧಿಸಿದಂತೆ, ಕಾನೂನು ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಇಂಥ ಹೀನ ಕೃತ್ಯಗಳನ್ನು ಸಹಿಸುವುದಿಲ್ಲ. ಅಪರಾಧ ಕೃತ್ಯಗಳನ್ನು ನಿಯಂತ್ರಿಸಲು ನೇಮಿಸಿದ ಸಿಬ್ಬಂದಿ ಗಾಂಜಾ ಮಾರಾಟದವರ ಜೊತೆ ಶಾಮೀಲಾಗುವುದು ಅಕ್ಷಮ್ಯ ಅಪರಾಧ’ ಎಂದಿದ್ದಾರೆ.
PublicNext
20/01/2022 06:23 pm