ಲಕ್ನೋ: 17 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಾಜವಾದಿ ಪಕ್ಷ (ಎಸ್‌ಪಿ) ಮತ್ತು ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಮಾಜಿ ಜಿಲ್ಲಾಧ್ಯಕ್ಷರ ವಿರುದ್ಧ ಲಲಿತ್‌ಪುರ ಪೊಲೀಸರು ಚಾರ್ಜ್‌ಶೀಟ್ ಸಲ್ಲಿಸಿದ್ದಾರೆ.
"ನಾನು 14 ವರ್ಷದವಳಿದ್ದಾಗ ನನಗೆ ಬಲವಂತವಾಗಿ ಅಶ್ಲೀಲ ವಿಡಿಯೋಗಳನ್ನು ತೋರಿಸಿ ನನ್ನ ತಂದೆಯೇ ನನ್ನ ಮೇಲೆ ಅತ್ಯಾಚಾರವೆಸಗಿದ್ದಾನೆ. ಬಳಿಕ ನನ್ನನ್ನು ವಿವಿಧ ಹೋಟೆಲ್‌ಗಳಿಗೆ ಕರೆದೊಯ್ಯಲು ಪ್ರಾರಂಭಿಸಿದ್ದನು. ಈ ವೇಳೆ ಎಸ್‌ಪಿ, ಬಿಎಸ್‌ಪಿ ನಾಯಕರು ಸೇರಿದಂತೆ ಅನೇಕ ಮಂದಿ ನನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ. ಯಾರಿಗೂ ಹೇಳದಂತೆ ತಂದೆ ಬೆದರಿಕೆ ಹಾಕಿದ್ದ" ಎಂದು ಸಂತ್ರಸ್ತೆ ದೂರಿನಲ್ಲಿ ಆರೋಪಿಸಿದ್ದಳು.
"ಸಂಗ್ರಹಿಸಿದ ಸಾಕ್ಷ್ಯಾಧಾರಗಳ ಮೇಲೆ ನಾವು ಇತ್ತೀಚೆಗೆ ಹುಡುಗಿಯ ತಂದೆ ಮತ್ತು ಸ್ಥಳೀಯ ರಾಜಕೀಯ ಮುಖಂಡರು ಸೇರಿದಂತೆ 19 ಜನರ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಿದ್ದೇವೆ. ಇಬ್ಬರು ಆರೋಪಿಗಳನ್ನು ಹೊರತುಪಡಿಸಿ 17 ಜನರನ್ನು ಜೈಲಿನಲ್ಲಿ ಇರಿಸಲಾಗಿದೆ" ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
PublicNext
24/01/2022 03:13 pm