ಮೈಸೂರು: ಮನೆ ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಗ್ರಾಮ ಸಭೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಸದಸ್ಯರ ನಡುವೆ ವಾಗ್ವಾದ ನಡೆದು ಬಳಿಕ ಕೈ ಕೈ ಮಿಲಾಯಿಸಿದ ಘಟನೆ ಮೈಸೂರು ಜಿಲ್ಲೆ ನಂಜನಗೂಡಿನ ಹಾಡ್ಯ ಗ್ರಾಮದಲ್ಲಿ ನಡೆದಿದೆ.
ಹೌದು ಶಾಂತಯುತವಾಗಿ ಆರಂಭವಾದ ಗ್ರಾಮ ಸಭೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾತಿಗೆ ಮಾತು ಆರಂಭವಾಗಿದೆ. ಇದು ವಿಕೋಪಕ್ಕೆ ತಿರುಗಿ ಮಾರಾಮಾರಿಯಾಗಿದೆ. ಈ ವೇಳೆ ಕಂದೇಗಾಲದ ರಾಜಶೇಖರ್ ಮತ್ತು ಹಾಡ್ಯದ ಗಣೇಶ್ ಎಂಬವರಿಗೆ ಗಂಭೀರ ಗಾಯವಾಗಿದೆ.
ಬಿಜೆಪಿ ಪಕ್ಷದ ವೀರಭದ್ರಪ್ಪ ಅಲಿಯಾಸ್ ಪಾಪು ಮತ್ತು ಕಾಂಗ್ರೆಸ್ ಪಕ್ಷದ ಮುಖಂಡ ರಾಜು ನಡುವೆ ವಾಸದ ಮನೆ ಹಂಚಿಕೆ ವಿಚಾರಕ್ಕೆ ಮಾತಿನ ಚಕಮಕಿ ವಿಕೋಪಕ್ಕೆ ತಿರುಗಿ ಗ್ರಾಮಸಭೆಯಲ್ಲಿದ್ದ ಖುರ್ಚಿ, ಕಲ್ಲುಗಳನ್ನು ತೂರಿ ಹಲ್ಲೆ ಮಾಡಲಾಗಿದೆ.
ಈ ಗಲಾಟೆಯಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಇನ್ನು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಕರಿಯಪ್ಪ ನಿರ್ಲಕ್ಷ್ಯ ಧೋರಣೆಯೇ ಈ ಸಂಘರ್ಷಕ್ಕೆ ಕಾರಣ ಎಂದು ಸ್ಥಳೀಯರು ಆರೋಪ ಮಾಡುತ್ತಿದ್ದಾರೆ. ಹುಲ್ಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
PublicNext
31/01/2022 05:07 pm