ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಸಿ.ಡಿ ಪ್ರಕರಣ ಭಾರಿ ಸದ್ದು ಮಾಡಿತ್ತು. ಈಗ ಹೆಚ್ಚು ಕಡಿಮೆ ಅಂತದ್ದೇ ಪ್ರಕರಣವನ್ನು ಹೋಲುವ ಮತ್ತೊಂದು ಬ್ಲ್ಯಾಕ್‌ಮೇಲ್ ಕೇಸ್ ಬಯಲಿಗೆ ಬಂದಿದೆ. ಉತ್ತರ ಕರ್ನಾಟಕ ಭಾಗದ ಶಾಸಕರೊಬ್ಬರಿಗೆ ಮಹಿಳೆಯೊಬ್ಬರು ಬ್ಲ್ಯಾಕ್‌ಮೇಲ್ ಮಾಡಿದ್ದಾರೆಂಬ ಆರೋಪ ಕೇಳಿಬಂದಿದೆ
ಬಿಜೆಪಿ ಶಾಸಕರೊಬ್ಬರಿಗೆ ಮಹಿಳೆ ಬ್ಲ್ಯಾಕ್‌ಮೇಲ್ ಮಾಡಿದ್ದಾಳೆ ಎನ್ನಲಾಗಿದೆ. ಕಿರುಕುಳ ಎದುರಿಸಿದ ಆ ಶಾಸಕ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಶಾಸಕರ ದೂರು ಪರಿಗಣಿಸಿ ಕಾರ್ಯಪ್ರವೃತ್ತರಾದ ಪೊಲೀಸರು, ಇದೀಗ ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ತಮಿಳುನಾಡಿನಲ್ಲಿ ಆರೋಪಿಗಳನ್ನ ವಶಕ್ಕೆ ಪಡೆದ ಬೆಂಗಳೂರು ಪೊಲೀಸರು ಆರೋಪಿಗಳನ್ನು ಬೆಂಗಳೂರಿಗೆ ಕರೆತರುತ್ತಿದ್ದಾರೆ ಎಂಬ ಮಾಹಿತಿ ಇದೆ.
PublicNext
07/02/2022 07:28 am