ಚಿಕ್ಕಮಗಳೂರು: ಶಿವಮೊಗ್ಗದಲ್ಲಿ ಹಿಂದೂ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣ ಪ್ರಕರಣವನ್ನ NIA (National Investigation Agency) ಗೆ ವರ್ಗಾಯಿಸುವಂತೆ ಕೇಂದ್ರ ಕೃಷಿ ಸಚಿವೆ ಶೋಭಾ ಕರಂದ್ಲಾಜೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಪತ್ರ ಬರೆದಿದ್ದಾರೆ.
ಹಿಂದೂ ಸಂಘಟನೆಯಲ್ಲಿ ಗುರುತಿಸಿಕೊಂಡವರನ್ನ ಟಾರ್ಗೆಟ್ ಮಾಡಲಾಗಿದೆ. ಬೆಂಗಳೂರಿನ ರುದ್ರೇಶ್ ಕೊಲೆ ಹಿಂದೆ ಪಿಎಫ್ ಐ ಕೈವಾಡವಿರುವುದು ಸಾಬೀತಾಗಿದೆ.
ಹರ್ಷ ಕೊಲೆ ಪ್ರಕರಣವನ್ನು ತಕ್ಷಣವೇ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಗೆ ವರ್ಗಾಯಿಸುವಂತೆ ಶೋಭಾ ಕರಂದ್ಲಾಜೆ ಆಗ್ರಹಿಸಿದ್ದಾರೆ.
PublicNext
21/02/2022 05:51 pm