ಶಿವಮೊಗ್ಗ: ಹಿಂದೂಪರ ಕಾರ್ಯಕರ್ತ ಹರ್ಷ ಹತ್ಯೆಯ ಹಿಂದೆ ಯಾರಿದ್ದಾರೆ? ಕೊಲೆಗೆ ನೈಜ ಕಾರಣ ಏನು ಎಂಬ ಬಗ್ಗೆ ಕೂಲಂಕುಶವಾಗಿ ತಿಳಿಯಬೇಕಾದರೆ ಎನ್ಐಎ ತನಿಖೆಗೆ ವಹಿಸಬೇಕು ಎಂದು ಸಚಿವ ಕೆ.ಎಸ್ ಈಶ್ವರಪ್ಪ ಆಗ್ರಹಿಸಿದ್ದಾರೆ.
ಈ ಕುರಿತಂತೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಶಿವಮೊಗ್ಗ ಇತಿಹಾಸದಲ್ಲೇ ಹೀಗೆ ನಡೆದಿರಲಿಲ್ಲ. ನಮ್ಮ ಒಬ್ಬ ಹಿಂದೂ ಕಾರ್ಯಕರ್ತನ ಕೊಲೆಯಾಗಿದೆ. ಈ ಬಗ್ಗೆ ಎನ್ಐಎ ತನಿಖೆಗೆ ವಹಿಸುವಂತೆ ನಾಳೆ ಸಿಎಂ ಬಸವರಾಜ ಬೊಮ್ಮಾಯಿ ಭೇಟಿಯಾಗಿ ಮನವಿ ಸಲ್ಲಿಸುತ್ತೇನೆ. ಹರ್ಷ ಕೊಲೆ ಮಾಡಿಸಿದ್ದು ನಾನೇ ಎಂಬುದಾಗಿ ಪರಿಷತ್ ವಿಪಕ್ಷ ನಾಯಕ ಬಿ.ಕೆ ಹರಿಪ್ರಸಾದ್ ಹೇಳಿದ್ದಾರೆ. ಅವರಿಗೆ ನೊಬೆಲ್ ಪ್ರಶಸ್ತಿ ಕೊಡಬೇಕು ಎಂದು ಕುಟುಕಿದ ಈಶ್ವರಪ್ಪ, ಕೃತ್ಯದಲ್ಲಿ ಭಾಗಿಯಾದ ಮೂವರು ಆರೋಪಿಗಳನ್ನು ಈಗಾಗಲೇ ಬಂಧಿಸಿರುವುದಾಗಿ ಗೃಹ ಸಚಿವರು ತಿಳಿಸಿದ್ದಾರೆ. ಹರ್ಷ ಕುಟುಂಬಸ್ಥರನ್ನು ಭೇಟಿಯಾಗಿ ಮತ್ತಷ್ಟು ಮಾಹಿತಿ ಪಡೆದಿದ್ದೇನೆ. ಹರ್ಷ ಸಾವಿಗೆ ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿರಂತರವಾಗಿ ನಡೆಯಲಿದೆ ಎಂದಿದ್ದಾರೆ.
PublicNext
21/02/2022 08:34 pm