ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೊಸಳೆ ಕಣ್ಣೀರು ಹಾಕಿ ಪರಿಹಾರ ಕೊಟ್ರೆ ಮುಗೀತಾ? ಇದಕ್ಕೆಲ್ಲ ಅಂತ್ಯ ಯಾವಾಗ?: ಕುಮಾರಸ್ವಾಮಿ ಪ್ರಶ್ನೆ

ಬೆಂಗಳೂರು: ಶಿವಮೊಗ್ಗ ನಗರದಲ್ಲಿ ನಡೆದ ಹಿಂದೂ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣವನ್ನು ತೀವ್ರವಾಗಿ ಖಂಡಿಸಿರುವ ಮಾಜಿ ಸಿಎಂ ಕುಮಾರಸ್ವಾಮಿ ರಾಷ್ಟ್ರೀಯ ಪಕ್ಷಗಳು ಹಿಂಸಾ ರಾಜಕಾರಣದ ಪೂರ್ಣ ಸಿನಿಮಾ ತೋರಿಸಲು ಹೊರಟಿವೆ ಎಂದಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, "ಶಿವಮೊಗ್ಗದಲ್ಲಿ ನಡೆದ ಯುವಕನ ಕೊಲೆ ಅಮಾನವೀಯ. ಆ ಯುವಕನ ಕುಟುಂಬಕ್ಕೆ ನನ್ನ ಸಾಂತ್ವನಗಳು. ಈ ಕೊಲೆಯ ಹಿಂದೆ ಯಾರೇ ಇದ್ದರೂ ಅವರನ್ನು ತಕ್ಷಣ ಪತ್ತೆಹಚ್ಚಿ ಬಂಧಿಸಬೇಕು ಎನ್ನುವುದು ಸರ್ಕಾರಕ್ಕೆ ನನ್ನ ಒತ್ತಾಯ ಎಂದು ಆಗ್ರಹಿಸಿರುವ ಕುಮಾರಸ್ವಾಮಿ, "ಹತ್ಯೆಗೀಡಾದ ಯುವಕನಿಗೆ ಮೊದಲೇ ಜೀವ ಬೆದರಿಕೆ ಇತ್ತೆಂದೂ, ಪೊಲೀಸರಿಗೆ ದೂರು ಕೊಡಲಾಗಿತ್ತು ಎಂದೂ ಹೇಳುತ್ತಿದ್ದಾರೆ. ಹಾಗಾದರೆ ಆ ಯುವಕನಿಗೆ ರಕ್ಷಣೆ ಯಾಕೆ ಕೊಡಲಿಲ್ಲ? ಇದಕ್ಕೆ ಉತ್ತರ ಬೇಕಿದೆ ಎಂದು ಸರ್ಕಾರಕ್ಕೆ ಪ್ರಶ್ನೆ ಮಾಡಿದ್ದಾರೆ.

"ಬಿಜೆಪಿ, ಕಾಂಗ್ರೆಸ್ ಪಕ್ಷಗಳು 2023ರ ಚುನಾವಣೆಗೆ ಸದನದಲ್ಲಿ ಗದ್ದಲ ಎಬ್ಬಿಸುವ ಮೂಲಕ ಟ್ರೈಲರ್ ಬಿಟ್ಟಿದ್ದು, ಸಿನಿಮಾ ಬಾಕಿ ಇದೆ ಎಂದಿದ್ದೆ. ಶಿವಮೊಗ್ಗ ಘಟನೆಯ ಮೂಲಕ ರಾಷ್ಟ್ರೀಯ ಪಕ್ಷಗಳು ಹಿಂಸಾ ರಾಜಕಾರಣದ ಪೂರ್ಣ ಸಿನಿಮಾ ತೋರಿಸಲು ಹೊರಟಿವೆ. ಜನರ ಸೂಕ್ಷ್ಮ ಭಾವನೆಗಳು ಹಾಗೂ ಸಮಾಜದ ಶಾಂತಿಯನ್ನು ಅಪಾಯಕ್ಕೆ ಒಡ್ಡಿ ಬೇಳೆ ಬೇಯಿಸಿಕೊಳ್ಳುತ್ತಿರುವ ರಾಷ್ಟ್ರೀಯ ಪಕ್ಷಗಳ ರಕ್ಕಸ ರಾಜಕಾರಣಕ್ಕೆ ಕ್ಷಮೆಯೇ ಇಲ್ಲ" ಎಂದು ಟ್ವೀಟ್ ಮಾಡಿರುವ ಕುಮಾರಸ್ವಾಮಿ ಸರ್ಕಾರದ ಮೇಲೆ ಆಕ್ರೋಶಿತರಾಗಿದ್ದಾರೆ.

Edited By : Nagaraj Tulugeri
PublicNext

PublicNext

21/02/2022 09:02 pm

Cinque Terre

101.13 K

Cinque Terre

11

ಸಂಬಂಧಿತ ಸುದ್ದಿ