ಹುಬ್ಬಳ್ಳಿ: ಶಿವಮೊಗ್ಗದಲ್ಲಿ ಹರ್ಷ ಹತ್ಯೆ ಖಂಡಿಸಿ ಭಾವಸಾರ ಕ್ಷತ್ರೀಯ ಮರಾಠಾ ಸಂಘದಿಂದ ಪ್ರತಿಭಟನೆ ನಡೆಸಲಾಯಿತು.
ಹುಬ್ಬಳ್ಳಿಯ ಸಂಗೊಳ್ಳಿ ರಾಯಣ್ಣ ವೃತ್ತದಿಂದ ತಹಶಿಲ್ದಾರ್ ಕಚೇರಿವರೆಗೆ ಪ್ರತಿಭಟನೆ ಮೆರವಣಿಗೆ ನಡೆಸಿ, ಹರ್ಷ ಹತ್ಯೆ ಮಾಡಿದವರಿಗೆ ಕಠಿಣ ಶಿಕ್ಷೆಗೆ ಆಗ್ರಹಿಸಿ ತಹಶೀಲ್ದಾರ್ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಹರ್ಷ ನಿಧನಕ್ಕೆ ಹಿಂದೂ ಪರಿಷತ್ ಉತ್ತರ ಕರ್ನಾಟಕ ಸಂಘಟನೆ ಕಾರ್ಯಕರ್ತರೂ ಇಲ್ಲಿನ ಹಳೆ ಹುಬ್ಬಳ್ಳಿಯ ಜಂಗ್ಲಿ ಪೇಟ್ ಸರ್ಕಲ್ ನಲ್ಲಿ ಶ್ರದ್ಧಾಂಜಲಿ ಸಲ್ಲಿಸಿದರು.
ಹಿಂದೂ ಕಾರ್ಯಕರ್ತರ ಶವದ ಮೇಲೆ ರಾಜ್ಯ ಬಿಜೆಪಿ ಸರ್ಕಾರ ರಾಜಕೀಯ ಮಾಡುತ್ತಿದೆ ಎಂದು ಆರೋಪಿಸಿದರು. ಮುಂದಿನ ದಿನಗಳಲ್ಲಿ ಈ ನಕಲಿ ಹಿಂದೂವಾದಿ ಪಕ್ಷಕ್ಕೆ ತಕ್ಕ ಪಾಠ ಕಲಿಸಲು ಹಿಂದೂ ಕಾರ್ಯಕರ್ತರು ಸಿದ್ಧರಾಗಬೇಕು ಎಂದು ಕರೆ ನೀಡಲಾಯಿತು.
PublicNext
22/02/2022 10:21 pm