ಕೋಲ್ಕತ್ತಾ: ಪಶ್ಚಿಮ ಬಂಗಾಳದ ಪಾನಿಹಟಿ ಪುರಸಭೆಯಲ್ಲಿ ನಡೆದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕೌನ್ಸಿಲರ್‌ನನ್ನು ಗುಂಡಿಕ್ಕಿ ಕೊಲೆಗೈದ ಘಟನೆ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾನಿಹಟಿ ಪುರಸಭೆಯ ವಾರ್ಡ್ ಸಂಖ್ಯೆ 8ರ ಟಿಎಂಸಿ ಕೌನ್ಸಿಲರ್ ಅನುಪಮ್ ದತ್ತಾ ಕೊಲೆಯಾದ ವ್ಯಕ್ತಿಯಾಗಿದ್ದಾರೆ. ಕೊಲೆಗೈದ ಆರೋಪಿ ಶಂಭುನಾಥ್ ಪಂಡಿತ್‌ನನ್ನು ಪೊಲೀಸರು ಬಂಧಿಸಿದ್ದಾರೆ.
ಅನುಪಮ್ ದತ್ತಾ ನಿನ್ನೆ (ಭಾನುವಾರ) ಸಂಜೆ ಅಗರ್ಪಾರಾದ ಉತ್ತರ ಸ್ಟೇಷನ್ ರಸ್ತೆಯಲ್ಲಿದ್ದಾಗ ಗುಂಡಿನ ದಾಳಿ ನಡೆದಿದೆ. ಇದರಿಂದಾಗಿ ಅನುಪಮ್ ಅವರ ತಲೆಗೆ ಗಂಭೀರ ಗಾಯವಾಗಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಸಾವನ್ನಪ್ಪಿದ್ದಾರೆ.
PublicNext
14/03/2022 05:25 pm