ಮುಜಾಫರ್‌ನಗರ: ಕೆಲವು ರೈತ ಸಂಘಟನೆಗಳ ನಾಯಕರ ಬಂಧನ ವಿರೋಧಿಸಿ ಭಾರತೀಯ ಕಿಸಾನ್ ಯೂನಿಯನ್ ನಾಯಕ ರಾಕೇಶ್ ಟಿಕಾಯತ್ ಮಂಗಳವಾರ ತಮ್ಮ ಬೆಂಬಲಿಗರೊಂದಿಗೆ ಪೊಲೀಸ್ ಠಾಣೆ ಎದುರು ಪ್ರತಿಭಟನೆ ಕೈಗೊಂಡಿದ್ದಾರೆ.
ಮುಜಾಫರ್‌ನಗರದ ಜಿಲ್ಲಾಸ್ಪತ್ರೆಯಲ್ಲಿ ನಡೆದ ಗಲಾಟೆ ಪ್ರಕರಣದಲ್ಲಿ ಪೊಲೀಸರು ಕೆಲವು ರೈತ ಮುಖಂಡರನ್ನು ಬಂಧಿಸಿದ್ದಾರೆ. ಬಂಧಿತರಾದ ರೈತ ಮುಖಂಡರನ್ನು ಕೂಡಲೇ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿ ಕೋತ್ವಾಲ್ ಪೊಲೀಸ್ ಠಾಣೆ ಮುಂದೆ ಟಿಕಾಯತ್ ಅವರು ಅನಿರ್ದಿಷ್ಟಾವಧಿ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ.
ಎರಡು ಗುಂಪಿನ ಜನರು ಆಸ್ಪತ್ರೆಗೆ ಬಂದಿದ್ದ ವೇಳೆ ಒಂದು ಗುಂಪಿನ ಕಡೆಯವರ ವೈದ್ಯಕೀಯ ಪರೀಕ್ಷೆ ನಡೆಸುತ್ತಿರೋದನ್ನು ನಿಲ್ಲಿಸಿ ಇನ್ನೊಂದು ಗುಂಪಿನ ವೈದ್ಯಕೀಯ ಪರೀಕ್ಷೆ ನಡೆಸುವಂತೆ ಬಿಕೆಯು ನಾಯಕರು ಒತ್ತಾಯಿಸಲು ಆರಂಭಿಸಿದ್ದಾರೆ. ಇದೇ ಕಾರಣಕ್ಕೆ ಎರಡು ಗುಂಪಿಗಳ ನಡುವೆ ಘರ್ಷಣೆ ನಡೆದಿದೆ ಎಂದು ವೈದ್ಯಾಧಿಕಾರಿ ಹೇಳಿದ್ದಾರೆ.
ಆದ್ರೆ ಬಿಕೆಯು ನಾಯಕ ರಾಕೇಶ್ ಟಿಕಾಯತ್ ವೈದ್ಯರ ಆರೋಪವನ್ನು ಅಲ್ಲಗೆಳೆದಿದ್ದಾರೆ. ಇದು ನಮ್ಮ ಮೇಲೆ ಹೊರಿಸಲಾದ ಸುಳ್ಳು ಆರೋಪ ಎಂದಿದ್ದಾರೆ.
PublicNext
29/03/2022 05:14 pm