ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉರ್ದು ಮಾತನಾಡಿಲ್ಲ ಎಂಬ ಕಾರಣಕ್ಕೆ ಕೊಲೆಯಾಗಿದೆ: ಗೃಹ ಸಚಿವ ಜ್ಞಾನೇಂದ್ರ

ಬೆಂಗಳೂರು: ನಗರದ ಗೋರಿಪಾಳ್ಯದಲ್ಲಿ ನಡೆದಿದ್ದ ಚಂದ್ರಶೇಖರ್ ಎಂಬ ಯುವಕನ ಕೊಲೆ ಪ್ರಕರಣಕ್ಕೆ ರೋಚಕ ತಿರುವು ಸಿಕ್ಕಿದೆ. ಉರ್ದು ಮಾತಾಡುವಂತೆ ಕೊಲೆ ಆರೋಪಿಗಳು ಒತ್ತಾಯಿಸಿದ್ದಾರೆ. ಆದ್ರೆ ಚಂದ್ರಶೇಖರ್‌ಗೆ ಉರ್ದು ಬಾರದ ಕಾರಣಕ್ಕೆ ಕೊಲೆಯಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಂಗಳವಾರ ಯುವಕ ಚಂದ್ರುವನ್ನು ದುಷ್ಕರ್ಮಿಗಳು ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ. ಈ ಕೊಲೆ ಪ್ರಕರಣದ ಬಗ್ಗೆ ಮಾಹಿತಿ ಪಡೆ‍ದಿದ್ದೇನೆ‌. ಆತ ಚಿಕನ್ ಖರೀದಿಸಲು ಹೋದಾಗ ಅಂಗಡಿಯವರು ಉರ್ದು ಮಾತಾಡಲು ಹೇಳಿದ್ದಾರೆ. ಆದರೆ ಚಂದ್ರುವಿಗೆ ಉರ್ದು ಮಾತನಾಡಲು ಬಂದಿಲ್ಲ. ಕನ್ನಡ ಭಾಷೆ ಬಿಟ್ಟು ಬೇರೆ ಭಾಷೆ ಬರಲಿಲ್ಲ ಎಂಬ ಕಾರಣಕ್ಕೆ ಅಮಾನುಷವಾಗಿ ಚೂರಿಯಿಂದ ಚುಚ್ಚಿ ಕೊಲೆ ಮಾಡಲಾಗಿದೆ. ಕೊಲೆಯಾದ ಚಂದ್ರು ದಲಿತ ಸಮುದಾಯಕ್ಕೆ ಸೇರಿದ ಯುವಕ‌. ಈ ಪ್ರಕರಣದ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಆರಗ ಜ್ಞಾನೇಂದ್ರ ಹೇಳಿದ್ದಾರೆ.

Edited By : Nagaraj Tulugeri
PublicNext

PublicNext

06/04/2022 11:33 am

Cinque Terre

42.8 K

Cinque Terre

38

ಸಂಬಂಧಿತ ಸುದ್ದಿ