ಬೆಂಗಳೂರು: ಬೆಂಗಳೂರಿನ ಜೆಜೆ ನಗರದಲ್ಲಿ ಯುವಕ ಚಂದ್ರು ಕೊಲೆ ಪ್ರಕರಣ ರಾಜ್ಯ ರಾಜಕಾರಣದಲ್ಲಿ ಹಲವು ವಿವಾದಾತ್ಮಕ ಹೇಳಿಕೆಗೆ ಗ್ರಾಸವಾಗಿದೆ. ಯುವಕ ಚಂದ್ರು ಕೊಲೆ ಪ್ರಕರಣ ಸಂಬಂಧ ಹೇಳಿಕೆ ನೀಡಿರುವ ಗೃಹ ಸಚಿವ ಆರಗ ಜ್ಞಾನೇಂದ್ರ ಹಾಗೂ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ವಿರುದ್ಧ ದೂರು ದಾಖಲಾಗಿದೆ.
ಗೃಹ ಸಚಿವ ಅರಗ ಜ್ಞಾನೇಂದ್ರ ವಿರುದ್ಧ ಕರ್ನಾಟಕ ಯೂತ್ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ ದೂರು ಸಲ್ಲಿಸಿದ್ದಾರೆ. ಕೇಂದ್ರ ವಿಭಾಗ ಡಿಸಿಪಿ ಅನುಚೇತ್ ಗೆ ದೂರು ನೀಡಿರುವ ನಲಪಾಡ್, ಜೆಜೆ ನಗರ ಚಂದ್ರು ಕೊಲೆ ಸಂಬಂಧ ಸಚಿವ ಅರಗ ಜ್ಞಾನೇಂದ್ರ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಅವರ ವಿರುದ್ಧ ಎಫ್ಐಆರ್ ದಾಖಲಿಸಿ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.
ಅರಗ ಜ್ಞಾನೇಂದ್ರ ಚಿಕ್ಕ ಮಗುವಲ್ಲ ಪದೇ ಪದೇ ಹೇಳಿಕೆ ಬದಲಿಸೋಕೆ. ಅರಗ ಜ್ಞಾನೇಂದ್ರ ಮೂರನೇ ಬಾರಿಗೆ ಈ ತರಹದ ಹೇಳಿಕೆ ಕೊಡ್ತಿದ್ದಾರೆ. ರಾಜ್ಯದ ಕೋಮು ಸಾಮರಸ್ಯ ಹಾಳು ಮಾಡುವ ಕೆಲಸವನ್ನ ಅರಗ ಜ್ಞಾನೇಂದ್ರ ಮಾಡಿದ್ದಾರೆ. ಅವರ ಮೇಲೆ ಎಫ್ಐಆರ್ ಮಾಡಬೇಕು ಎಂದಿದ್ದಾರೆ.
PublicNext
07/04/2022 08:31 pm