ಉಡುಪಿ: ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಅವರ ವಿರುದ್ಧ ಈಚೆಗೆ ಶೇ 40ರಷ್ಟು ಕಮಿಷನ್ ಆರೋಪ ಮಾಡಿ ಸುದ್ದಿಯಾಗಿದ್ದ ಗುತ್ತಿಗೆದಾರ ಸಂತೋಷ್ ಪಾಟೀಲ ಆತ್ಮಹತ್ಯೆಗೆ ಶರಣಾಗಿದ್ದಾನೆ.
ಬೆಳಗಾವಿ ತಾಲ್ಲೂಕಿನ ಹಿಂಡಲಗಾ ಗ್ರಾಮದ ಗುತ್ತಿಗೆದಾರ ಮತ್ತು ಬಿಜೆಪಿ ಕಾರ್ಯಕರ್ತರೂ ಆಗಿರುವ ಸಂತೋಷ್ ಪಾಟೀಲ ಉಡುಪಿಯ ಕೆಎಸ್ಆರ್ಟಿಸಿ ಬಸ್ ನಿಲ್ದಾಣ ಸಮೀಪದ ಶಾಂಭವಿ ಲಾಡ್ಜಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸಂತೋಷನ ಇಬ್ಬರು ಗೆಳೆಯರು ಪಕ್ಕದ ಕೊಠಡಿಯಲ್ಲಿ ಉಳಿದುಕೊಂಡಿದ್ದರು ಎನ್ನಲಾಗಿದೆ. ಸದ್ಯ ಸ್ಥಳಕ್ಕೆ ಉಡುಪಿ ನಗರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸಾವಿಗೂ ಮುನ್ನ ಸಂತೋಷ್ ಪಾಟೀಲ, 'ನನ್ನ ಸಾವಿಗೆ ಸಚಿವ ಕೆ.ಎಸ್.ಈಶ್ವರಪ್ಪ ಕಾರಣ. ಸಚಿವರಿಗೆ ಶಿಕ್ಷೆಯಾಗಬೇಕು. ನನ್ನೆಲ್ಲ ಆಸೆ ಬದಿಗೊತ್ತಿ ಆತ್ಮಹತ್ಯೆ ನಿರ್ಧಾರ ಮಾಡಿದ್ದೇನೆ. ನನ್ನ ಹೆಂಡತಿ, ಮಕ್ಕಳಿಗೆ ಪ್ರಧಾನಿ ಮೋದಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿ.ಎಸ್. ಯಡಿಯೂರಪ್ಪ ಸಹಾಯ ಮಾಡಬೇಕು' ಎಂದು ವಾಟ್ಸಾಪ್ ಸ್ಟೇಟಸ್, ಮೆಸೇಜ್ ಹಾಕಿದ್ದರು. ಇದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಈ ಬೆನ್ನಲ್ಲೇ ಎಚ್ಚೆತ್ತುಕೊಂಡ ಬೆಳಗಾವಿ ಪೊಲೀಸರು ಸಂತೋಶ್ ಪಾಟೀಲ ಪತ್ತೆಗಾಗಿ ಕಾರ್ಯಾಚರಣೆ ನಡೆಸಿದ್ದರು. ಅವರ ಮೊಬೈಲ್ ಫೋನ್ ರಿಂಗ್ ಆಗುತ್ತಿದೆ. ಆದರೆ ಸ್ವೀಕರಿಸುತ್ತಿಲ್ಲ. ಆ ಫೋನ್ ಸಂಖ್ಯೆಯ ಲೊಕೇಷನ್ ಉಡುಪಿ ವ್ಯಾಪ್ತಿಯಲ್ಲಿರುವುದಾಗಿ ಬರುತ್ತಿದೆ ಎಂದು ಪೊಲೀಸರು ತಿಳಿಸಿದ್ದರು.
ಈ ಬಗ್ಗೆ ನಿನ್ನೆ (ಸೋಮವಾರ) ಪ್ರತಿಕ್ರಿಯೆ ನೀಡಿದ್ದ ಡಿಸಿಪಿ ರವೀಂದ್ರ ಗಡಾದಿ, "ಮಾಧ್ಯಮದ ಮೂಲಕ ವಿಷಯ ಗಮನಕ್ಕೆ ಬಂದಿದೆ. ಮನೆಗೆ ಭೇಟಿ ನೀಡಿ ವರದಿ ಕೊಡುವಂತೆ ವ್ಯಾಪ್ತಿಯ ಪೊಲೀಸರಿಗೆ ಸೂಚಿಸಿದ್ದೇನೆ. ಸಂತೋಷ್ ಹಾಗೂ ಕುಟುಂಬದವರು ಮಂಗಳೂರು ಕಡೆಗೆ ಪ್ರವಾಸ ಹೋಗಿದ್ದಾರೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ" ಎಂದು ತಿಳಿಸಿದ್ದರು.
PublicNext
12/04/2022 12:41 pm