ಬೆಂಗಳೂರು : ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ 40 ಪರ್ಸೆಂಟ್ ಕಮಿಷನ್ ಕೇಳುತ್ತಿದ್ದಾರೆ ಎಂದು ಆರೋಪ ಮಾಡಿ ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಶ್ವರಪ್ಪ ವಿರುದ್ಧ ಉಡುಪಿ ಠಾಣೆಯಲ್ಲಿ ದೂರು ದಾಖಲಾಗಿದೆ.
ಇನ್ನು ಈಶ್ವರಪ್ಪ ಆಪ್ತರಾದ ಬಸವರಾಜ್, ರಮೇಶ್ ಅವರ ಹೆಸರಗಳೂ ಎಫ್ ಐಆರ್ ನಲ್ಲಿ ನಮೂದಾಗಿವೆ. ಪ್ರಕರಣದಲ್ಲಿ ಸಚಿವ ಈಶ್ವರಪ್ಪ ಮೊದಲ ಆರೋಪಿ. ಸಚಿವರ ಆಪ್ತ ಬಸವರಾಜ್ A2, ಇನ್ನೋರ್ವ ಆಪ್ತ ರಮೇಶ್ A3 ಆರೋಪಿಯಾಗಿದ್ದಾರೆ. ಐಪಿಸಿ ಸೆಕ್ಷನ್ 34 ಮತ್ತು 306 ಕಲಂ ಅಡಿಯಲ್ಲಿ ಸಂತೋಷ್ ಸೋದರ ಸಂಬಂಧಿ ಪ್ರಶಾಂತ ಪಾಟೀಲ್ ದೂರು ದಾಖಲಿಸಿದ್ದಾರೆ.
ರಸ್ತೆ ಕಾಮಗಾರಿಯ 4 ಕೋಟಿ ಬಿಡುಗಡೆಗೆ ಈಶ್ವರಪ್ಪ ತಮ್ಮ ಆಪ್ತರ ಮೂಲಕ ಶೇ 40ರಷ್ಟು ಕಮಿಷನ್ ಗೆ ಒತ್ತಾಯಿಸಿದ್ದರು ಎಂದು ಸಂತೋಷ್ ಮನವಿ ಮಾಡಿದ್ದರು. ಈ ಬಗ್ಗೆ ಪ್ರಧಾನಿ ಸೇರಿದಂತೆ ಹಲವರಿಗೆ ಮನವಿ ಮಾಡಿದ್ದರೂ ಪ್ರಯೋಜನವಾಗಿರಲಿಲ್ಲ. ಬಿಲ್ ಮಂಜೂರು ಮಾಡದ ಕಾರಣ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಆರೋಪ ಮಾಡಿದ್ದರು. ‘ಇದು ಅನುಮಾನಾಸ್ಪದ ಸಾವು ಇದಾಗಿದ್ದು, ಮೂವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು’ ಎಂದು ದೂರಿನಲ್ಲಿ ಪ್ರಶಾಂತ್ ಪಾಟೀಲ್ ಉಲ್ಲೇಖಿಸಿದ್ದಾರೆ.
PublicNext
13/04/2022 07:31 am