ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪಂಜಾಬ್ ಮಾಜಿ ಸಿಎಂ ಚೆನ್ನಿಗೆ ಇ.ಡಿ ಸಂಕಟ: ಅಧಿಕಾರಿಗಳಿಂದ ವಿಚಾರಣೆ

ಚಂಡೀಗಢ: ಮರಳು ಗಣಿಗಾರಿಕೆ ಕೇಸ್‌ನಲ್ಲಿ ಹಣ ವರ್ಗಾವಣೆ ಮಾಡಿದ ಆರಡೋಪದ ಮೇಲೆ ಪಂಜಾಬ್ ಸಿಎಂ ಚರಣ್‌ಜಿತ್ ಸಿಂಗ್ ಚೆನ್ನಿ ಅವರನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಸುಮಾರು ಆರು ತಾಸು ವಿಚಾರಣೆಗೆ ಒಳಪಡಿಸಿದ್ದಾರೆ.

ಹಣ ವರ್ಗಾವಣೆ ತಡೆ ಕಾಯ್ದೆ ಅಡಿಯಲ್ಲಿ 59 ವರ್ಷದ ಕಾಂಗ್ರೆಸ್ ಮುಖಂಡನ ಹೇಳಿಕೆಯನ್ನು ಇ.ಡಿ ಅಧಿಕಾರಿಗಳು ದಾಖಲಿಸಿಕೊಂಡಿದ್ದಾರೆ. ಬುಧವಾರ ತಡರಾತ್ರಿ ಜಲಂಧರ್‌ನಲ್ಲಿನ ಇ.ಡಿ ವಲಯ ಕಚೇರಿಯಿಂದ ಅವರು ನಿರ್ಗಮಿಸಿದ್ದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಭೂಪೇಂದ್ರ ಸಿಂಗ್ ಮತ್ತಿತರೊಂದಿಗೆ ಹೊಂದಿರುವ ನಂಟಿನ ಆಧಾರದ ಮೇಲೆ ಇಡಿ ಚನ್ನಿಗೆ ಹಲವು ಬಾರಿ ಸಮನ್ಸ್ ನೀಡಿತ್ತು. ಆದರೆ, ವಿಚಾರಣೆಗೆ ಅವರು ಹಾಜರಾಗಿರಲಿಲ್ಲ. ಅಕ್ರಮ ಮರಳು ಗಣಿಗಾರಿಕೆಗೆ ನೆರವಾಗುವ ನಿಟ್ಟಿನಲ್ಲಿ ಕೆಲವೊಂದು ಅಧಿಕಾರಿಗಳ ವರ್ಗಾವಣೆ ಮಾಡಿರುವ ಆರೋಪವನ್ನು ಚನ್ನಿ ಎದುರಿಸುತ್ತಿರುವುದಾಗಿ ಮೂಲಗಳು ತಿಳಿಸಿವೆ. ಈ ಪ್ರಕರಣದಲ್ಲಿ ಚನ್ನಿ ಸೋದರಳಿಯ ಭೂಪೇಂದರ್ ಸಿಂಗ್ ಅವರನ್ನು ಪಂಜಾಬ್ ವಿಧಾನಸಭಾ ಚುನಾವಣೆಗೂ ಮುನ್ನ ಬಂಧಿಸಲಾಗಿತ್ತು. ಈ ತಿಂಗಳ ಆರಂಭದಲ್ಲಿ ಭೂಪೇಂದ್ರ ಸಿಂಗ್ ಮತ್ತಿತರರ ವಿರುದ್ಧ ಚಾರ್ಚ್ ಶೀಟ್ ಸಲ್ಲಿಸಲಾಗಿತ್ತು.

Edited By : Nagaraj Tulugeri
PublicNext

PublicNext

14/04/2022 03:45 pm

Cinque Terre

46.9 K

Cinque Terre

7

ಸಂಬಂಧಿತ ಸುದ್ದಿ