ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಚಿವೆಯ ವಿಜಯ ಯಾತ್ರೆಯಲ್ಲಿ ಟ್ರಾಫಿಕ್ ಜಾಮ್- 8 ತಿಂಗಳ ಮಗು ಸಾವು.!

ಅಮರಾವತಿ: ಆಂಧ್ರ ಪ್ರದೇಶದ ಮುಖ್ಯಮಂತ್ರಿ ಜಗನ್​ ಮೋಹನ್​ ರೆಡ್ಡಿ ಸಂಪುಟ ವಿಸ್ತರಣೆ ಆಗಿದ್ದು, ಶಾಸಕಿ ಉಷಾ ಶ್ರೀಚರಣ್ ಅವರಿಗೂ ಸಚಿವ ಸ್ಥಾನ ಸಿಕ್ಕಿದೆ. ಈ ಹಿನ್ನೆಲೆಯಲ್ಲಿ ಕೈಗೊಂಡಿದ್ದ ವಿಜಯ ಯಾತ್ರೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿ 8 ತಿಂಗಳ ಮಗುವೊಂದು ಸಾವನ್ನಪ್ಪಿದೆ ಎಂಬ ಆರೋಪ ಕೇಳಿ ಬಂದಿದೆ.

ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಕಲ್ಯಾಣದುರ್ಗದಲ್ಲಿ ಶುಕ್ರವಾರ ರಾತ್ರಿ ಈ ಘಟನೆ ನಡೆದಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆಯಾಗಿ ಆಯ್ಕೆಯಾಗಿರುವ ಉಷಾ ಶ್ರೀಚರಣ್​​, ರಸ್ತೆಯಲ್ಲಿ ವಿಜಯ್ ಯಾತ್ರೆ ನಡೆಸುತ್ತಿದ್ದರು. ಈ ವೇಳೆ ಅನಂತಪುರ ಜಿಲ್ಲೆಯ ಶೆಟ್ಟೂರು ಮಂಡಲದ ಚೆರ್ಲೋಪಲ್ಲಿ ಗ್ರಾಮದ ಗಣೇಶ್ ಮತ್ತು ಪತ್ನಿ ಈರಕ್ಕ ಎಂಬ ದಂಪತಿಯ ಅನಾರೋಗ್ಯದಿಂದ ಬಳಲುತ್ತಿದ್ದ ಮಗುವನ್ನು ಕಲ್ಯಾಣದುರ್ಗ ಟೌನ್​ನಲ್ಲಿರುವ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದರು. ಆದರೆ ರಸ್ತೆಯಲ್ಲಿ ದೊಡ್ಡ ಮಟ್ಟದ ಟ್ರಾಫಿಕ್​ ಉಂಟಾಗಿರುವ ಕಾರಣ ವೇಗವಾಗಿ ತೆರಳಲು ಸಾಧ್ಯವಾಗಿಲ್ಲ. ಹೀಗಾಗಿ ಮಗು ದಾರಿ ಮಧ್ಯೆ ಸಾವನ್ನಪ್ಪಿದೆ. ಇದರ ಬೆನ್ನಲ್ಲೇ ಟ್ರಾಫಿಕ್ ಪೊಲೀಸರ ನಿರ್ಲಕ್ಷ್ಯದಿಂದಲೇ ತಮ್ಮ ಮಗು ಸಾವನ್ನಪ್ಪಿದೆ ಎಂದು ಕುಟುಂಬಸ್ಥರು ಆರೋಪ ಮಾಡಿದ್ದು, ನ್ಯಾಯಕ್ಕಾಗಿ ಆಗ್ರಹಿಸಿದ್ದಾರೆ. ಈ ವೇಳೆ ಅವರನ್ನು ಪೊಲೀಸರು ಚದುರಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂಥೆ ತೆಲುಗು ದೇಶಂ ಪಾರ್ಟಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಸೇರಿದಂತೆ ಇತರೆ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದು, ತನಿಖೆಗೆ ಒತ್ತಾಯಿಸಿದ್ದಾರೆ.

Edited By : Vijay Kumar
PublicNext

PublicNext

16/04/2022 04:54 pm

Cinque Terre

74.63 K

Cinque Terre

14

ಸಂಬಂಧಿತ ಸುದ್ದಿ