ನವದೆಹಲಿ: ಬಿಜೆಪಿ ನಾಯಕ ಜೀತು ಚೌಧರಿ ಅವರ ಮೇಲೆ ದುಷ್ಕರ್ಮಿಗಳು ಗುಂಡು ಹಾರಿಸಿ ಹತ್ಯೆಗೈದಿರುವ ಘಟನೆ ದೆಹಲಿಯ ಮಯೂರ್ ವಿಹಾರ್ ಪ್ರದೇಶದಲ್ಲಿ ನಡೆದಿದೆ.
ಬುಧವಾರ ರಾತ್ರಿ 8:15ರ ಸುಮಾರಿಗೆ ಬಿಜೆಪಿ ನಾಯಕನ ಮೇಲೆ ಅಪರಿಚಿತ ವ್ಯಕ್ತಿಗಳು ಗುಂಡಿನ ದಾಳಿ ನಡೆಸಿದ್ದಾರೆ. ನಂತರ ಅವರನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಚಿಕಿತ್ಸೆ ಫಲಾಕಾರಿಯಾಗದೇ ಸಾವನ್ನಪ್ಪಿದ್ದಾರೆ. ಹತ್ಯೆಯ ಸುಳಿವು ಸಿಗದಿರುವುದರಿಂದ ಪ್ರತ್ಯಕ್ಷದರ್ಶಿಗಳು ಮುಂದೆ ಬಂದು ಸಾಕ್ಷಿ ಹೇಳುವಂತೆ ಪೊಲೀಸರು ಕೋರಿದ್ದಾರೆ. ಈ ನಡುವೆ ಸಿಸಿಟಿವಿಯಲ್ಲಿ ಸುಳಿವಿಗಾಗಿ ಹುಡುಕಾಟ ಜಾರಿಯಲ್ಲಿದೆ.
ಘಟನೆ ನಡೆದ ಸ್ಥಳವನ್ನು ಪರಿಶೀಲಿಸಿದ ಪೊಲೀಸರು ಸ್ಥಳದಿಂದ ಕೆಲವು ಖಾಲಿ ಕಾಟ್ರಿಡ್ಜ್‍ಗಳು ಮತ್ತು ಇತರೆ ಪುರಾವೆಗಳನ್ನು ವಶಪಡಿಸಿಕೊಂಡಿದ್ದಾರೆ. ಸದ್ಯ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ವಶಪಡಿಸಿಕೊಂಡಿದ್ದು, ಆರೋಪಿಗಳಿಗಾಗಿ ಪರಿಶೀಲನೆ ನಡೆಸುತ್ತಿದ್ದಾರೆ.
PublicNext
21/04/2022 08:36 am