ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

PSI ನೇಮಕಾತಿ ಹಗರಣದ ಕಿಂಗ್ ಪಿನ್ ದಿವ್ಯಾ ಹಾಗರಗಿ ಅರೆಸ್ಟ್

ಕಲಬುರಗಿ: 545 ಪಿಎಸ್ ಐ ಹುದ್ದೆಗಳ ನೇಮಕಾತಿ ಹಗರಣದ ಪ್ರಮುಖ ಆರೋಪಿ ದಿವ್ಯಾ ಹಾಗರಗಿ ಬಂಧನವಾಗಿದೆ. ಕಳೆದ 18 ದಿನಗಳಿಂದ ತಲೆಮರೆಸಿಕೊಂಡಿದ್ದ ಬಿಜೆಪಿ ನಾಯಕಿ ದಿವ್ಯಾ ಹಾಗರಗಿಯನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ. ಪುಣೆಯ ಬಳಿ ಮಧ್ಯರಾತ್ರಿ ಒಂದು ಗಂಟೆ ಸುಮಾರಿಗೆ ಆಕೆಯನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ.

ಪಿಎಸ್ ಐ ನೇಮಕಾತಿ ಅಕ್ರಮ ಬಯಲಾಗುತ್ತಿದ್ದಂತೆ ಪರಾರಿಯಾಗಿದ್ದ ದಿವ್ಯಾ ಮಹಾರಾಷ್ಟ್ರ ಬಿಟ್ಟು ಬೇರೆಲ್ಲು ತೆರಳಿರಲಿಲ್ಲ. ಸದ್ಯ ಸಿಐಡಿ ತಂಡ ಎಲ್ಲಾ ಕಡೆ ಹುಡುಕಾಟ ನಡೆಸಿ ಕೊನೆಗೂ ಅರೆಸ್ಟ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನು ತಲೆಮರಿಸಿಕೊಂಡ ಆರೋಪಿಗಳಾದ ದಿವ್ಯಾ ಹಾಗರಗಿ, ಮಂಜುನಾಥ್, ಕಾಶೀನಾಥ್, ರವೀಂದ್ರ, ಶಾಂತಿಬಾಯಿ, ಅರ್ಚನಾ ಅವರನ್ನು ಬಂಧಿಸುವಂತೆ ಕಲಬುರಗಿಯ ಮೂರನೇ ಜೆಎಂಎಫ್ಸಿ ಕೋರ್ಟ್ನಿಂದ ಅರೆಸ್ಟ್ ವಾರಂಟ್ ಜಾರಿಗೊಳಿಸಲಾಗಿದೆ.

Edited By : Nirmala Aralikatti
PublicNext

PublicNext

29/04/2022 07:09 am

Cinque Terre

121.84 K

Cinque Terre

22

ಸಂಬಂಧಿತ ಸುದ್ದಿ