ಮುಂಬೈ: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರಿಂದ ಎಂ.ಎಫ್ ಹುಸೇನ್ ವರ್ಣಚಿತ್ರವನ್ನು ಖರೀದಿಸಲು ಒತ್ತಾಯಿಸಲಾಯಿತು ಮತ್ತು ಮಾರಾಟದ ಹಣವನ್ನು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ವೈದ್ಯಕೀಯ ಚಿಕಿತ್ಸೆಗಾಗಿ ಗಾಂಧಿ ಕುಟುಂಬ ಬಳಸಿಕೊಂಡಿದೆ ಎಂದು ಜಾರಿ ನಿರ್ದೇಶನಾಲಯ (ಇ.ಡಿ)ಅಧಿಕಾರಿಗಳಿಗೆ ಯೆಸ್ ಬ್ಯಾಂಕ್ ಸಹ ಸಂಸ್ಥಾಪಕ ರಾಣಾ ಕಪೂರ್ ಅವರು ತಿಳಿಸಿದ್ದಾರೆ ಎನ್ನಲಾಗಿದೆ . ಈ ಸಂಬಂಧ ಫೆಡರಲ್ ಆ್ಯಂಟಿ ಮನಿ ಲಾಂಡರಿಂಗ್ ಏಜೆನ್ಸಿ ಮುಂಬೈನ ವಿಶೇಷ ನ್ಯಾಯಾಲಯದಲ್ಲಿ ಆರೋಪಪಟ್ಟಿ ಸಲ್ಲಿಸಿದೆ.
ಎಂ.ಎಫ್. ಹುಸೇನ್ ಅವರ ಪೇಂಟಿಂಗ್ ಅನ್ನು ಖರೀದಿಸಲು ನಿರಾಕರಿಸಿದರೆ ಗಾಂಧಿ ಕುಟುಂಬದೊಂದಿಗೆ ಬಾಂಧವ್ಯವನ್ನು ಬೆಳೆಸುವುದು ಮಾತ್ರವಲ್ಲದೆ ಪದ್ಮಭೂಷಣ ಪ್ರಶಸ್ತಿಯನ್ನು ಪಡೆಯುವುದು ಸಹ ಸಾಧ್ಯವಾಗುವುದಿಲ್ಲ ಎಂದು ಅಂದಿನ ಪೆಟ್ರೋಲಿಯಂ ಸಚಿವ ಮುರಳಿ ದೇವೋರಾ ಅವರು ಹೇಳಿದ್ದರು ಎಂದು ರಾಣಾ ಕಪೂರ್ ಇಡಿಗೆ ತಿಳಿಸಿದ್ದಾರೆ ಎಂದೂ ಚಾರ್ಜ್‌ಶೀಟ್‌ನಲ್ಲಿ ಹೇಳಲಾಗಿದೆ.
PublicNext
29/04/2022 09:09 pm