ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಿಜೆಪಿ ಮುಖಂಡನಿಗೆ ಗುಂಡಿಕ್ಕಿ ಹತ್ಯೆ.!

ರಾಂಚಿ: ಜಾರ್ಖಂಡ್‍ನ ಲೋಹರ್ದಗಾ ಜಿಲ್ಲೆಯಲ್ಲಿ ಸ್ಥಳೀಯ ಬಿಜೆಪಿ ಮುಖಂಡನಿಗೆ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಬಗ್ಗೆ ಮಾಹಿತಿ ಮಾಡಿರುವ ಪ್ರಭಾರಿ ಅಧಿಕಾರಿ ಅನಿಲ್ ಕುಮಾರ್, 'ಕುರು ಪೊಲೀಸ್ ಠಾಣಾ ವ್ಯಾಪ್ತಿಯ ಚಟಕ್‍ಪುರ ಗ್ರಾಮದಲ್ಲಿ ಇಂದು (ಸೋಮವಾರ) ಮುಂಜಾನೆ 2 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಮೃತರನ್ನು ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ರತನ್ ಮಹತೋ ಎಂದು ಗುರುತಿಸಲಾಗಿದೆ. ರತನ್ ಅವರು ಮನೆಯಲ್ಲಿ ಮಲಗಿಕೊಂಡಿದ್ದ ಸಮಯದಲ್ಲಿ ಆರೋಪಿಗಳು ಗುಂಡು ಹಾರಿಸಿದ್ದಾರೆ. ಪರಿಣಾಮ ಸ್ಥಳೀಯರು ಸೇರಿಕೊಂಡು ರತನ್ ಅವರನ್ನು ಆಸ್ಪತ್ರೆಗೆ ಸಾಗಿಸಲು ಮುಂದಾಗಿದ್ದು, ದಾರಿ ಮಧ್ಯೆಯೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ.

ಜಮೀನು ವಿವಾದವೇ ಕೊಲೆಗೆ ಕಾರಣ ಎಂಬ ಶಂಕೆ ವ್ಯಕ್ತವಾಗಿದೆ. ಕೃತ್ಯ ಮಾಡಿದವರು ಸ್ಥಳದಿಂದ ಪರಾರಿಯಾಗಿದ್ದಾರೆ. ಆದರೆ ಇಬ್ಬರು ಆಪಾದಿತ ದಾಳಿಕೋರರು ಯಾರು ಎಂಬುದನ್ನು ಗುರುತಿಸಿದ್ದಾರೆ. ಪ್ರಸ್ತುತ ಆರೋಪಿಗಳಿಗಾಗಿ ಶೋಧ ಕಾರ್ಯವನ್ನು ಪ್ರಾರಂಭಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

Edited By : Vijay Kumar
PublicNext

PublicNext

09/05/2022 06:12 pm

Cinque Terre

63.86 K

Cinque Terre

1

ಸಂಬಂಧಿತ ಸುದ್ದಿ