ಅಮರಾವತಿ: ಆಂಧ್ರ ಪ್ರದೇಶದಲ್ಲಿ ಹೊಸದಾಗಿ ರಚಿಸಲಾದ ಕೋನಸೀಮಾ ಜಿಲ್ಲೆಯನ್ನು ಬಿ.ಆರ್.ಅಂಬೇಡ್ಕರ್ ಕೋನಸೀಮಾ ಜಿಲ್ಲೆ ಎಂದು ಮರುನಾಮಕರಣ ಮಾಡುವ ಕುರಿತು ಅಮಲಾಪುರಂನಲ್ಲಿ ಹಿಂಸಾಚಾರ ನಡೆದಿದೆ. ಈ ವೇಳೆ ಪ್ರತಿಭಟನಾಕಾರರು ಆಂಧ್ರ ಪ್ರದೇಶದ ಸಾರಿಗೆ ಸಚಿವ ಪಿನಿಪೆ ವಿಶ್ವರುಪ್ ಮತ್ತು ಶಾಸಕ ಪೊನ್ನಡ ಸತೀಶ್ ಅವರ ಮನೆಗಳಿಗೆ ಬೆಂಕಿ ಹಚ್ಚಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.
ಪೊಲೀಸ್ ವಾಹನ ಮತ್ತು ಶಿಕ್ಷಣ ಸಂಸ್ಥೆಯ ಬಸ್‌ಗೂ ಬೆಂಕಿ ಹಚ್ಚಲಾಗಿದೆ. ಹಿಂಸಾಚಾರದಲ್ಲಿ ಹಲವಾರು ಪೊಲೀಸರು ಗಾಯಗೊಂಡಿದ್ದಾರೆ. ಅಮಲಾಪುರಂ ಮತ್ತು ಕೋನಸೀಮಾ ಜಿಲ್ಲೆಯ ಕೆಲವು ಭಾಗಗಳಲ್ಲಿ ಕಾನೂನು ಸುವ್ಯವಸ್ಥೆ ಇಲ್ಲದಂತಾಗಿದೆ. ಮತ್ತೊಂದೆಡೆ ಜನರನ್ನು ಚದುರಿಸಲು ಅಮಲಾಪುರಂನಲ್ಲಿ ಪೊಲೀಸರು ಗುಂಡು ಹಾರಿಸಿದ್ದು, ಪರಿಸ್ಥಿತಿಯನ್ನು ಹತೋಟಿಗೆ ತರಲು ಪ್ರಯತ್ನಿಸುತ್ತಿದ್ದಾರೆ.
PublicNext
24/05/2022 10:52 pm