ಬೆಂಗಳೂರು: ನಾಡಗೀತೆಗೆ ಅವಮಾನ ಮಾಡಿದ್ದಾರೆಂಬ ಆರೋಪದ ಹಿನ್ನೆಲೆ ಸಾಹಿತಿ ಹಾಗೂ ಪಠ್ಯ ಪರಿಷ್ಕರಣಾ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ವಿರುದ್ಧ ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಸಾಮಾಜಿಕ ಕಾರ್ಯಕರ್ತ ಬಿ.ಟಿ.ನಾಗಣ್ಣ ಎಂಬುವರು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ರೋಹಿತ್ ಚಕ್ರತೀರ್ಥ ವಿರುದ್ಧ ದೂರು ದಾಖಲಿಸಿದ್ದಾರೆ. ರೋಹಿತ್ ಚಕ್ರತೀರ್ಥ ನಾಡಗೀತೆಗೆ ಅವಮಾನ ಮಾಡಿದಂತಹ ವ್ಯಕ್ತಿ, ಭಾರತವನ್ನು ಅರಬ್ ಹೋಲಿಸಿದ ವ್ಯಕ್ತಿ. ಇಂಥವರನ್ನು ಪಠ್ಯಪುಸ್ತಕ ಪರಿಷ್ಕರಣಾ ಸಮಿತಿ ಅಧ್ಯಕ್ಷರನ್ನಾಗಿ ಮಾಡಿರುವುದು ಸರಿಯಲ್ಲ. ಹೀಗಾಗಿ ರೋಹಿತ್ ಚಕ್ರತೀರ್ಥ ವಿರುದ್ಧ ಕ್ರಮ ಕೈಗೊಳ್ಳುವಂತೆ ಬಿ.ಟಿ.ನಾಗಣ್ಣ ಎಂಬುವರು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
PublicNext
01/06/2022 09:06 am