ಲಕ್ನೋ: ಉತ್ತರ ಪ್ರದೇಶದ ಕಾನ್ಪುರದಲ್ಲಿ ಭುಗಿಲೆದ್ದ ಹಿಂಸಾಚಾರದ ನಾಲ್ಕು ದಿನಗಳ ನಂತರ ಪ್ರವಾದಿ ಮೊಹಮ್ಮದ್ ಪೈಗಂಬರ್ ಬಗ್ಗೆ ಅವಹೇಳನಕಾರಿ ಟ್ವೀಟ್ ಮಾಡಿದ ಬಿಜೆಪಿ ನಾಯಕನನ್ನು ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.
ಕಾನ್ಪುರದ ಬಿಜೆಪಿ ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಹರ್ಷಿತ್ ಶ್ರೀವಾಸ್ತವ ಬಂಧಿತ ಆರೋಪಿ. ಪೊಲೀಸರು ಹರ್ಷಿತ್ ಶ್ರೀವಾಸ್ತವ ವಿರುದ್ಧ ಪ್ರಕರಣ ದಾಖಲಿಸಿ ಟ್ವೀಟ್ ಅನ್ನು ಡಿಲೀಟ್ ಮಾಡಿದ್ದಾರೆ. ಹರ್ಷಿತ್ ಮಾಡಿದ್ದ ಟ್ವೀಟ್‌ನಿಂದಾಗಿ ಇನ್ನಷ್ಟು ಗೊಂದಲದ ಪರಿಸ್ಥಿತಿ ಎದುರಾಗುವ ಸಾಧ್ಯತೆ ಇತ್ತು. ಹರ್ಷಿತ್ ಅವರ ಟ್ವೀಟ್ ವೈರಲ್ ಆಗುತ್ತಿದ್ದಂತೆ ಪೊಲೀಸರು ಕಾರ್ಯೋನ್ಮುಖರಾಗಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
"ಧಾರ್ಮಿಕ ಭಾವನೆಗಳೊಂದಿಗೆ ಆಟವಾಡಲು ಪ್ರಯತ್ನಿಸುವವರ ವಿರುದ್ಧ ನಾವು ಕಠಿಣ ಕ್ರಮಗಳನ್ನು ಕೈಗೊಳ್ಳುತ್ತೇವೆ. ಸದ್ಯ ನಾಯಕನ ಟ್ವೀಟ್‌ಗಳನ್ನು ಅಳಿಸಲಾಗಿದೆ" ಎಂದು ಕಾನ್ಪುರ ಪೊಲೀಸ್ ಕಮಿಷನರ್ ವಿಜಯ್ ಮೀನಾ ಹೇಳಿದ್ದಾರೆ.
PublicNext
08/06/2022 08:24 am