ಭೋಪಾಲ್: ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಚೇರ್, ಕೋಲು ಹಿಡಿದು ಹೊಡೆದಾಡಿಕೊಂಡ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಮಧ್ಯಪ್ರದೇಶದ ಇಂದೋರ್‌ನಲ್ಲಿ ಮಂಗಳವಾರ (ಜುಲೈ 5)ರಂದು ಈ ಘಟನೆ ನಡೆದಿದೆ. ಇಂದೋರ್‌ನ ಖಾತಿಪುರ ಪ್ರದೇಶದಲ್ಲಿ 20ನೇ ವಾರ್ಡ್‌ನ ಬಿಜೆಪಿ ಕೌನ್ಸಿಲರ್ ಅಭ್ಯರ್ಥಿಯ ಕಚೇರಿಯನ್ನು ಧ್ವಂಸಗೊಳಿಸಿದ ಸಿಸಿಟಿವಿ ವಿಡಿಯೋ ವೈರಲ್ ಆಗುತ್ತಿದೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೀರಾ ನಗರ ಸಹಾಯಕ ಪೊಲೀಸ್ ಆಯುಕ್ತ (ಎಸಿಪಿ) ಡಿಎಸ್ ಯೆವಾಲೆ ತಿಳಿಸಿದ್ದಾರೆ.
PublicNext
07/07/2022 09:11 am