ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಗುತ್ತಿಗೆದಾರ ಆತ್ಮಹತ್ಯೆ ಕೇಸ್‌ನಲ್ಲಿ ಕ್ಲೀನ್ ಚಿಟ್: ಈಶ್ವರಪ್ಪ ಮನೆಯಲ್ಲಿ ಸಂಭ್ರಮಾಚರಣೆ

ಬೆಂಗಳೂರು: ಉಡುಪಿಯ ಲಾಡ್ಜ್ ಒಂದರಲ್ಲಿ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆಗೆ ಶರಣಾಗಿದ್ದರು. ಆತ್ಮಹತ್ಯೆಗೂ ಮುನ್ನ ನನ್ನ ಸಾವಿಗೆ ಸಚಿವ ಕೆ.ಎಸ್ ಈಶ್ವರಪ್ಪ ಎಂಬುದಾಗಿ ಸಂಬಂಧಿಕರಿಗೆ ಸಂದೇಶ ಕಳುಹಿಸಿದ್ದರು. ಈ ಮೂಲಕ ಡೆತ್ ನೋಟ್ ನಲ್ಲಿ ಈಶ್ವರಪ್ಪ ಹೆಸರನ್ನು ಉಲ್ಲೇಖಿಸಿದ್ದರು.

ಈ ಪ್ರಕರಣದ ತನಿಖೆಯನ್ನು ನಡೆಸಿರುವಂತ ಪೊಲೀಸರು, ನ್ಯಾಯಾಲಯಕ್ಕೆ ಬಿ-ರಿಪೋರ್ಟ್ ಸಲ್ಲಿಸಿದ್ದಾರೆ ಎಂಬುದಾಗಿ ಹೇಳಲಾಗುತ್ತಿದೆ. ಈ ಮೂಲಕ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪಗೆ ಪ್ರಕರಣದಲ್ಲಿ ಕ್ಲೀನ್ ಚಿಟ್ ನೀಡಲಾಗಿದೆ. ಈ ಹಿನ್ನಲೆಯಲ್ಲಿ ಶಿವಮೊಗ್ಗದ ಅವರ ನಿವಾಸದಲ್ಲಿ ಸಿಹಿ ಹಂಚಿ ಸಂಭ್ರಮಾಚರಣೆ ನಡೆಸಲಾಯಿತು.ಈಶ್ವರಪ್ಪ ವಿರುದ್ಧ ಗುತ್ತಿಗೆಯಲ್ಲಿ ಕಮೀಷನ್ ಆರೋಪ ಮಾಡುವ ಮೂಲಕ, ಗುತ್ತಿಗೆದಾರ ಸಂತೋಷ್ ಪಾಟೀಲ್ ಸುದ್ದಿಯಾಗಿದ್ದರು.

ಇದೇ ಕಾರಣದಿಂದ ಅವರು ಪ್ರಧಾನಿ, ಸೇರಿದಂತೆ ಕೇಂದ್ರ ಸಚಿವರಿಗೂ ಗುತ್ತಿಗೆ ಕಮೀಷನ್ ವಿರುದ್ಧ ದೂರು ನೀಡಿದ್ದರು. ಆ ಬಳಿಕ ಉಡುಪಿಯ ಲಾಡ್ಜ್ ಒಂದರಲ್ಲಿ ಆತ್ಮಹತ್ಯೆಗೆ ಶರಣಾಗಿದ್ದರು. ಅವರು ಆತ್ಮಹತ್ಯೆಗೂ ವಾಟ್ಸಾಪ್ ಮೂಲಕ ತನ್ನ ಸಾವಿಗೆ ಈಶ್ವರಪ್ಪ ಕಾರಣ ಎಂಬುದಾಗಿ ಡೆತ್ ನೋಟ್ ಸಂದೇಶ ಕಳುಹಿಸಿದ್ದರು.ಇದೇ ಪ್ರಕಣರದಲ್ಲಿ ಸಚಿವಸ್ಥಾನಕ್ಕೆ ಕೆ ಎಸ್ ಈಶ್ವರಪ್ಪ ರಾಜೀನಾಮೆ ನೀಡುವಂತೆ ಆಗಿತ್ತು. ಈ ಪ್ರಕರಣ ಸಂಬಂಧ ತನಿಖೆ ನಡೆಸಿದ ಉಡುಪಿಯ ಪೊಲೀಸರು, ಈಶ್ವರಪ್ಪ ಪ್ರಚೋದಿಸಿದ್ದಕ್ಕೆ ಸಾಕ್ಷ್ಯಗಳೇ ಇಲ್ಲ. ಆತ್ಮಹತ್ಯೆಗೆ ಕುಮ್ಮಕ್ಕು ಎಂಬುದಕ್ಕೆ ಸಾಕ್ಷ್ಯಗಳಿಲ್ಲ ಎಂಬುದಾಗಿ ವರದಿಯಲ್ಲಿ ಉಲ್ಲೇಖಿಸಿ, ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಅಂತಿಮ ವರದಿಯನ್ನು ಸಲ್ಲಿಸಿದ್ದಾರೆ. ಈ ಮೂಲಕ ಮಾಜಿ ಸಚಿವ ಕೆ ಎಸ್ ಈಶ್ವರಪ್ಪಗೆ ಕ್ಲೀನ್ ಚಿಟ್ ನೀಡಲಾಗಿದೆ.

ಈ ಕುರಿತಂತೆ ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಈಶ್ವರಪ್ಪ, ನ್ಯಾಯಾಲಯಕ್ಕೆ ಪೊಲೀಸರು ಬಿ-ರಿಪೋರ್ಟ್ ಸಲ್ಲಿಸಿರುವ ವಿಷಯ ಕೇಳಿ ಸಂತೋಷವಾಗಿದೆ. ನಾನು ತಪ್ಪು ಮಾಡಿಲ್ಲವೆಂದು ಮನೆದೇವರು ಚೌಡೇಶ್ವರಿ ಮೇಲೆ ಆಣೆ ಮಾಡಿ ಹೇಳಿದ್ದೆ. ಆ ತಾಯಿಯ ಆಶೀರ್ವಾದದಿಂದ ಕೇಸ್‌ನಲ್ಲಿ ಖುಲಾಸೆಯಾಗಿದೆ. ಆರೋಪದಿಂದ ಮುಕ್ತನಾಗುವೆ ಎಂಬ ವಿಶ್ವಾಸವಿದೆ ಎಂಬುದಾಗಿ ಹೇಳಿದ್ದಾರೆ.

Edited By : Nagaraj Tulugeri
PublicNext

PublicNext

20/07/2022 07:30 pm

Cinque Terre

52.75 K

Cinque Terre

4

ಸಂಬಂಧಿತ ಸುದ್ದಿ