ಭೋಪಾಲ್: ಪ್ರವಾದಿ ಮಹಮ್ಮದ್ ಕುರಿತಾಗಿ ಹೇಳಿಕೆ ನೀಡಿದ್ದ ಬಿಜೆಪಿ ಮಾಜಿ ವಕ್ತಾರೆ ನೂಪುರ್ ಶರ್ಮಾರನ್ನು ಬೆಂಬಲಿಸಿದ್ದಕ್ಕಾಗಿ ಉದಯಪುರದಲ್ಲಿ ಕನ್ಹಯ್ಯಾ ಲಾಲ್, ಅಮರಾವತಿಯಲ್ಲಿ ಉಮೇಶ್ ಕೋಲ್ಹೆ ಹತ್ಯೆ, ಬಿಹಾರದ ಯುವಕನೊಬ್ಬ ಮೇಲೆ ಹಲ್ಲೆ ಬೆನ್ನಲ್ಲೇ ಮಧ್ಯಪ್ರದೇಶದಲ್ಲಿ ವ್ಯಕ್ತಿಯೋರ್ವರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆದಿದೆ.
ಆಯುಷ್ ಜಾದಮ್ ಹಲ್ಲೆಗೆ ಒಳಗಾದ ವ್ಯಕ್ತಿ. ಗುಂಪೊಂದು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಪರಾರಿಯಾಗಿದೆ. ದಾಳಿಗೆ ಒಳಗಾದ ಆಯುಷ್ ಅವರು ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.
ಪ್ರವಾದಿ ಮಹಮ್ಮದ್ ವಿರುದ್ಧ ಆಕ್ಷೇಪಾರ್ಹ ಮಾತುಗಳನ್ನು ಆಡಿದ್ದ ನೂಪುರ್ ಶರ್ಮಾರನ್ನು ಆಯುಷ್ ಬೆಂಬಲಿಸಿದ್ದರು. ಅದಕ್ಕಾಗಿ ಆಯುಷ್ ಮೇಲೆ ಹಲ್ಲೆ ನಡೆದಿದೆ ಎಂದು ಅಗರ್ ಮಾಲ್ವಾ ಪೊಲೀಸ್ ವರಿಷ್ಠಾಧಿಕಾರಿ ರಾಕೇಶ್ ಸಾಗರ್ ತಿಳಿಸಿದ್ದಾರೆ.
ದಾಳಿಗೆ ಸಂಬಂಧಿಸಿ ದೂರು ನೀಡಲಾಗಿದ್ದು, 13 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಅವರಲ್ಲಿ ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
PublicNext
21/07/2022 08:47 am