ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಆಪ್ತೆ ಮನೆಯಲ್ಲಿ 20 ಕೋಟಿ ಕ್ಯಾಶ್ : ಬಂಗಾಳ ಸಚಿವ ಅರೆಸ್ಟ್

ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಇಡಿ ಅಧಿಕಾರಿಗಳು ಭರ್ಜರಿ ಬೇಟಿಯಾಡಿದ್ದಾರೆ. ಈ ವೇಳೆ ಬರೋಬ್ಬರಿ 20 ಕೋಟಿ ರೂಪಾಯಿ ನಗದು ಹಣ ಪತ್ತೆಯಾಗಿದೆ. ಸದ್ಯ ಈ ಕೇಸ್ ಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ ಸಚಿವ ಹಾಗೂ ತೃಣಮೂಲ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಪಾರ್ಥ ಚಟರ್ಜಿ ಮತ್ತು ಅವರ ಆಪ್ತೆ ಅರ್ಪಿತಾ ಮುಖರ್ಜಿಯನ್ನು ಜಾರಿ ನಿರ್ದೇಶನಾಲಯ (ಇಡಿ)ದ ಅಧಿಕಾರಿಗಳು ಬಂಧಿಸಿದ್ದಾರೆ.

ಪಶ್ಚಿಮ ಬಂಗಾಳದ ಶಿಕ್ಷಕರ ನೇಮಕಾತಿಯಲ್ಲಿ ಭಾರಿ ಮೊತ್ತದ ಹಣಕಾಸಿನ ಅವ್ಯವಹಾರ ನಡೆದಿದ್ದು, ಇದು ಪಾರ್ಥ ಅವರ ನೆರಳಿನಲ್ಲಿಯೇ ನಡೆದಿದೆ ಎಂದು ಇ.ಡಿ ಅಧಿಕಾರಿಗಳು ಆರೋಪಿಸಿದ್ದಾರೆ.

ಎಸ್ ಎಸ್ ಸಿ (ಸ್ಕೂಲ್ ಸರ್ವೀಸ್ ಕಮಿಷನ್) ಹಗರಣ ಸಂಬಂಧ ಇಡಿ ಅಧಿಕಾರಿಗಳು ಶುಕ್ರವಾರ (ಜುಲೈ 22) ಪಾರ್ಥ ಚಟರ್ಜಿ ಅವರ ಆಪ್ತೆ ಅರ್ಪಿತಾ ನಿವಾಸದ ಮೇಲೆ ದಾಳಿ ಮಾಡಿದಾಗ 20 ಕೋಟಿ ರೂಪಾಯಿ ನಗದು ಮತ್ತು 20ಕ್ಕೂ ಹೆಚ್ಚು ಮೊಬೈಲ್ ಫೋನ್ ಗಳನ್ನು ಪತ್ತೆಯಾಗಿದ್ದವು. ಈ ಪ್ರಕರಣ ಸಂಬಂಧ ಚಟರ್ಜಿ ಅವರನ್ನು 26 ಗಂಟೆಗಳ ಕಾಲ ವಿಚಾರಣೆ ನಡೆಸಿದ ಇಡಿ ಅಧಿಕಾರಿಗಳು ಅವರನ್ನು ಬಂಧಿಸಿದ್ದಾರೆ. ಅವರ ಆಪ್ತೆಯ ಬಂಧನವು ಆಗಿದೆ.

Edited By : Nirmala Aralikatti
PublicNext

PublicNext

23/07/2022 12:38 pm

Cinque Terre

45.57 K

Cinque Terre

3