ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪ್ರವೀಣ್ ನೆಟ್ಟಾರು ಹತ್ಯೆ : ಐವರು ಶಂಕಿತ ಆರೋಪಿಗಳು ವಶಕ್ಕೆ

ಮಂಗಳೂರು: ಬಿಜೆಪಿ ಮುಖಂಡ ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಶಂಕಿತ ಐವರನ್ನು ವಶಕ್ಕೆ ಪಡೆದು ತನಿಖೆ ಕೈಗೊಂಡಿದ್ದಾರೆ. ಕೇರಳದಲ್ಲಿ ರಿಜಿಸ್ಟರ್ ಆಗಿರೋ ಬೈಕ್ ಮೇಲೆ ಏಕಾಏಕಿ ಬಂದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಕೊಚ್ಚಿ ಹತ್ಯೆ ಮಾಡಿದ್ದರು ಎನ್ನಲಾಗಿತ್ತು.

ಇದೀಗ ಪ್ರಕರಣ ಸಂಬಂಧ ಐವರು ಶಂಕಿತರನ್ನ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಇವರೆಲ್ಲ ಬೆಳ್ಳಾರೆ ಗ್ರಾಮದ ಮೂಲದವರು ಎನ್ನಲಾಗಿದೆ. ಶಂಕಿತರ ಹತ್ತಿರವಿದ್ದ ಮೊಬೈಲ್ ಗಳನ್ನು ವಶಕ್ಕೆ ಪಡೆದುಕೊಂಡು, ಮಂಗಳೂರು ಹೊರ ಭಾಗದ ಅಜ್ಞಾತ ಸ್ಥಳದಲ್ಲಿ ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

Edited By : Nirmala Aralikatti
PublicNext

PublicNext

27/07/2022 02:35 pm

Cinque Terre

48.66 K

Cinque Terre

9

ಸಂಬಂಧಿತ ಸುದ್ದಿ