ಲಕ್ನೋ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಶಿರಚ್ಛೇದನ ಮಾಡುವುದಾಗಿ ವ್ಯಕ್ತಿಯೊಬ್ಬ ಫೇಸ್‌ಬುಕ್‌ನಲ್ಲಿ ಬೆದರಿಕೆ ಹಾಕಿದ್ದಾರೆ.
ಉತ್ತರ ಪ್ರದೇಶದ ನಾಗರಿಕ ಆತ್ಮಪ್ರಕಾಶ್ ಪಂಡಿತ್ ಎಂಬಾತನ ಫೇಸ್ಬುಕ್ ಖಾತೆಯಲ್ಲಿ ಪ್ರಕಟವಾಗಿರುವ ಪೋಸ್ಟ್ ಒಂದು ಈಗ ದೊಡ್ಡಮಟ್ಟದಲ್ಲಿ ಸುದ್ದಿಯಾಗಿದೆ. ಈ ಪೋಸ್ಟ್ನಲ್ಲಿ ಸಿಎಂ ಯೋಗಿ ಆದಿತ್ಯನಾಥ್ ಅವರಿಗೆ ಶಿರಚ್ಛೇದದ ಬೆದರಿಕೆ ಹಾಕಲಾಗಿದೆ. ಈ ಹಿನ್ನೆಲೆಯಲ್ಲಿ ಸೈಬರ್ ಠಾಣೆ ಪೊಲೀಸರು ಪ್ರಕರಣ ದಾಖಲಿಕೊಂಡಿದ್ದು, ತನಿಖೆ ಆರಂಭಿಸಿದ್ದಾರೆ. 'ತನ್ನ ಫೇಸ್ಬುಕ್ ಖಾತೆ ದುರ್ಬಳಕೆ ಆಗಿದೆ' ಎಂದು ತನಿಖೆ ವೇಳೆ ಅವರು ಸೈಬರ್ ಠಾಣೆಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಉತ್ತರ ಪ್ರದೇಶದ ಮೊರಾದಾಬಾದ್ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.
PublicNext
21/08/2022 08:50 am