ಮುಝಾಫರ್‌ನಗರ: ಗ್ರಾಮದ ಮುಖ್ಯಸ್ಥನೊಬ್ಬ ದಲಿತ ಯುವಕನ ಮೇಲೆ ಬೂಟಿನಿಂದ ಹಲ್ಲೆ ಮಾಡಿದ್ದಾನೆ. ಉತ್ತರ ಪ್ರದೇಶದ ಮುಝಾಫರ್‌ನಗರದಲ್ಲಿ ಈ ಘಟನೆ ನಡೆದಿದೆ.
ಕ್ಷುಲ್ಲಕ ಕಾರಣಕ್ಕೆ ಈ ಹಲ್ಲೆ ನಡೆದಿದೆ ಎನ್ನಲಾಗಿದೆ. ಗ್ರಾಮದ ಇತರ ಮುಖಂಡರ ಎದುರೇ ಹಲ್ಲೆ ನಡೆದಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಹಲ್ಲೆಗೈದ ಮುಖಂಡ ಹಾಗೂ ಕೃತ್ಯಕ್ಕೆ ಸಹಕರಿಸಿದವರ ಮೇಲೆ ಹಲ್ಲೆ ಹಾಗೂ ಕೊಲೆಗೆ ಯತ್ನ ಪ್ರಕರಣ ದಾಖಲಾಗಿದೆ.
27 ವರ್ಷದ ದಿನೇಶ್‌ಕುಮಾರ್ ಎಂಬಾತರೇ ಹಲ್ಲೆಗೊಳಗಾದ ಯುವಕ. ಎಸ್‌ಸಿ, ಎಸ್‌ಟಿ ದೌರ್ಜನ್ಯ ಕಾಯ್ದೆ ಅಡಿ ಇಬ್ಬರ ಮೇಲೂ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ವರಿಷ್ಟಾಧಿಕಾರಿ ಅರ್ಪಿತ್ ವಿಜಯವರ್ಗಿಯಾ ಮಾಧ್ಯಮಕ್ಕೆ ತಿಳಿಸಿದ್ದಾರೆ.
PublicNext
23/08/2022 12:16 pm