ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಜೀವ ಬೆದರಿಕೆ ಆರೋಪ, ಸಚಿವ ಆನಂದ್ ಸಿಂಗ್‌ ವಿರುದ್ಧ ಎಫ್‌ಐಆರ್

ಹೊಸಪೇಟೆ: ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಕುಟುಂಬವೊಂದಕ್ಕೆ ಜೀವ ಬೆದರಿಕೆ ಹಾಕಿದ ಆರೋಪದ ಮೇಲೆ ಪ್ರವಾಸೋದ್ಯಮ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಆನಂದ್ ಸಿಂಗ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಪ್ರವಾಸೋದ್ಯಮ ಸಚಿವ ಆನಂದ್‌ ಸಿಂಗ್‌ ಹಾಗೂ ಇತರೆ ಮೂವರ ವಿರುದ್ಧ ಇಲ್ಲಿನ ಗ್ರಾಮೀಣ ಪೊಲೀಸ್‌ ಠಾಣೆಯಲ್ಲಿ ಮಂಗಳವಾರ ರಾತ್ರಿ ಪ್ರಕರಣ ದಾಖಲಾಗಿದೆ. ಡಿ. ಪೋಲಪ್ಪ ಎಂಬುವರು ಕೊಟ್ಟ ದೂರಿನ ಮೇರೆಗೆ ಎಸ್‌ಸಿ-ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆ ಹಾಗೂ ಐಪಿಸಿ ಸೆಕ್ಷನ್ 504, 506ರ ಅಡಿ ಆನಂದ್ ಸಿಂಗ್‌, ಮರಿಯಪ್ಪ, ಹನುಮಂತಪ್ಪ ಹಾಗೂ ಹುಲುಗಪ್ಪ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ. ಅರುಣ್‌ ಕೆ ತಿಳಿಸಿದ್ದಾರೆ.

ಏನಿದು ಪ್ರಕರಣ?

ವಿಜಯನಗರ ಜಿಲ್ಲೆಯ ಹಳ್ಳಿಯೊಂದರ ಜಮೀನಿಗೆ ಸಂಬಂಧಿಸಿದಂತೆ ಒಂದು ಸಮುದಾಯದವರು ಮತ್ತು ಎಸ್‌ಸಿ ಸಮುದಾಯಕ್ಕೆ ಸೇರಿದ ಡಿ. ಪೋಲಪ್ಪ ನಡುವೆ ವಿವಾದವಿದೆ. ಮಂಗಳವಾರ ಇದೇ ಗ್ರಾಮಕ್ಕೆ ಸಚಿವ ಆನಂದ್ ಸಿಂಗ್‌ ಭೇಟಿ ನೀಡಿದ್ದ ವೇಳೆ ಸಮುದಾಯದವರು ಸಚಿವರ ಮುಂದೆ ಈ ಜಮೀನು ವಿವಾದವನ್ನು ಬಗೆಹರಿಸಲು ಸಹಕರಿಸುವಂತೆ ಮನವಿ ಮಾಡಿದ್ದರು.

ಬಳಿಕ, 'ತಮ್ಮ ಇಡೀ ಕುಟುಂಬವನ್ನು ಸುಟ್ಟು ಹಾಕುವುದಾಗಿ ಸಚಿವರು ಬೆದರಿಕೆ ಹಾಕಿದ್ದಾರೆ' ಎಂದು ಪೋಲಪ್ಪ ಅವರು ತಮ್ಮ ದೂರಿನಲ್ಲಿ ಆರೋಪಿಸಿದ್ದರು. ಅಷ್ಟೇ ಅಲ್ಲದೆ ದೂರುದಾರರು ತಮ್ಮ ಐವರು ಸಂಬಂಧಿಕರೊಂದಿಗೆ ಮಂಗಳವಾರ ಸಂಜೆ ಹೊಸಪೇಟೆ ಗ್ರಾಮಾಂತರ ಪೊಲೀಸ್ ಠಾಣೆ ಬಳಿ ಪೆಟ್ರೋಲ್‌ ಸುರಿದುಕೊಂಡು ಬೆಂಕಿ ಹಚ್ಚಿಕೊಳ್ಳಲೂ ಯತ್ನಿಸಿದ್ದರು. ಆದರೆ ಈ ವೇಳೆ ಅವರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣ ಸಂಬಂಧ ಪೋಲಪ್ಪ ಮತ್ತು ಇತರ ಐವರ ವಿರುದ್ಧವೂ ಕೇಸ್‌ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

Edited By : Vijay Kumar
PublicNext

PublicNext

01/09/2022 10:40 am

Cinque Terre

30.86 K

Cinque Terre

7

ಸಂಬಂಧಿತ ಸುದ್ದಿ