ಚಂಡೀಗಢ: ಎಲ್ಲರ ಎದುರೇ ಆಮ್ ಆದ್ಮಿ ಪಕ್ಷದ (ಎಎಪಿ) ಶಾಸಕಿ ಬಲ್ಜಿಂದರ್ ಕೌರ್ ಅವರ ಮೇಲೆ ಪತಿ ಹಲ್ಲೆ ನಡೆಸಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಎಎಪಿ ಶಾಸಕಿ ಬಲ್ಜಿಂದರ್ ಕೌರ್ ಅವರಿಗೆ ಆಕೆಯ ಶಾಸಕ ಪತಿ ಸುಖರಾಜ್ ಸಿಂಗ್ ಕಪಾಳಮೋಕ್ಷ ಮಾಡಿದ್ದಾರೆ. ಆಡಳಿತ ಪಕ್ಷದ ನಾಯಕರೂ ಆಗಿರುವ ಸುಖರಾಜ್ ಸಿಂಗ್ ಪಂಜಾಬ್ನ ತಲ್ವಾಂಡಿ ಸಾಬೋ ಕ್ಷೇತ್ರದಿಂದ ಎರಡು ಸಲ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಸುಖರಾಜ್ ಸಿಂಗ್ ಅವರೊಂದಿಗೆ ಪತ್ನಿ ಬಲ್ಜಿಂದರ್ ಕೌರ್ ವಾದ ಮಾಡುತ್ತಿರುವುದು ವಿಡಿಯೋದಲ್ಲಿ ಕಾಣಬಹುದು. ಈ ಸಂದರ್ಭದಲ್ಲಿ ಆಕ್ರೋಶಗೊಂಡಿರುವ ಸುಖರಾಜ್ ಹಲ್ಲೆ ನಡೆಸಿದ್ದಾರೆ.
ಕಪಾಳಕ್ಕೆ ಹೊಡೆದಿದ್ದಾರೆ. ಈ ಘಟನೆ ಜುಲೈ 10ರಂದು ನಡೆದಿದೆ. ಘಟನೆ ನಡೆದಾಗ ಕೆಲವರು ಮಧ್ಯಪ್ರವೇಶಿಸಿ ಎಲ್ಲರನ್ನೂ ದೂರ ತಳ್ಳಿದ್ದಾರೆ. ಈ ಸಂಬಂಧಿಸಿದಂತೆ ಯಾವುದೇ ದೂರು ದಾಖಲಾಗಿಲ್ಲ. ಪಂಜಾಬ್ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಮನೀಶಾ ಗುಲಾಟಿ ಪ್ರಕರಣದ ಬಗ್ಗೆ ಸ್ವಯಂಪ್ರೇರಿತವಾಗಿ ನೋಟಿಸ್ ನೀಡುವಂತೆ ಪೊಲೀಸ್ ಇಲಾಖೆಗೆ ಸೂಚಿಸಿದ್ದಾರೆ. ಬಲ್ಜಿಂದರ್ ಕೌರ್ ಹಾಗೂ ಸುಖರಾಜ್ ಸಿಂಗ್ 2019ರ ಫೆಬ್ರವರಿ ತಿಂಗಳಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.
PublicNext
02/09/2022 12:11 pm