ಮೈಸೂರು: ಇಂದಿನಿಂದ ಮೈಸೂರಿನ ಪ್ರವಾಸಿ ತಾಣಗಳು ಓಪನ್ ಮಾಡುವಂತೆ ಸಹಕಾರ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಸ್ ಟಿ ಸೋಮಶೇಖರ್ ಘೋಷಣೆ ಮಾಡಿದ್ದಾರೆ.
ನಾಡಹಬ್ಬ ದಸರಾ ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಆದೇಶದ ಮೇರೆಗೆ ತೆರೆಯುವಂತೆ ಸಚಿವರು ಘೋಷಿಸಿದ್ದಾರೆ. ಈ ಮೂಲಕ ಚಾಮುಂಡಿ ಬೆಟ್ಟ, ನಂಜನಗೂಡು ಶ್ರೀಕಂಠೇಶ್ವರ ದೇವಸ್ಥಾನ, ಅರಮನೆ ಪ್ರವೇಶಕ್ಕೆ ಗ್ರೀನ್ ಸಿಗ್ನಲ್ ಸಿಕ್ಕಿದೆ.
ಇದಕ್ಕೂ ಮುನ್ನ ಮೈಸೂರು ಜಿಲ್ಲಾಡಳಿತವು ನವೆಂಬರ್ 1ರವೆಗೂ ನಿರ್ಬಂಧ ಹೇರಿತ್ತು. ಇದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ಮೈಸೂರಿನ ಹಲವು ಸಂಘ ಸಂಸ್ಥೆಗಳು ಈ ಬಗ್ಗೆ ಸಿಎಂಗೆ ಮನವಿ ಮಾಡಿಕೊಂಡಿದ್ದವು. ಈ ಮನವಿಗೆ ಸಿಎಂ ಸ್ಪಂದಿಸಿದ್ದು, ಸದ್ಯ ಎಲ್ಲಾ ಪ್ರವಾಸಿತಾಣಗಳು ಪ್ರವಾಸಿಗರಿಗೆ ಮುಕ್ತವಾಗಲಿದೆ.
PublicNext
17/10/2020 10:18 am