ದಾವಣಗೆರೆ: ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಅವರ ಹಿರಿಯ ಪುತ್ರ, ಕೈಗಾರಿಕೋದ್ಯಮಿ ಎಸ್.ಎಸ್. ಬಕ್ಕೇಶ್ ಅವರ ಮನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿಶ್ಚಿತಾರ್ಥ ಕಾರ್ಯಕ್ರಮಕ್ಕೆ ಕುಟುಂಬ ಸಮೇತರಾಗಿ ರವಿವಾರ ಭೇಟಿ ನೀಡಿದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಹತ್ತಿರದ ಸಂಬಂಧಿ ಚನ್ನು ಪಾಟೀಲ ಅವರ ಸುಪುತ್ರ ಅಭಿಷೇಕ ಎಂಬುವವರಿಗೆ ಶಾಮನೂರು ಶಿವಶಂಕರಪ್ಪ ಅವರ ಪುತ್ರ ಎಸ್.ಎಸ್.ಬಕ್ಕೇಶ ಅವರ ಪುತ್ರಿ ಅಕ್ಷತಾ ಬಕ್ಕೇಶ ಅವರೊಂದಿಗೆ ಮದುವೆ ನಿಶ್ಚಿತಾರ್ಥ ಕಾರ್ಯಕ್ರಮ ರವಿವಾರ ನಡೆಯಿತು. ಈ ಸಂದರ್ಭದಲ್ಲಿ ಬಸವರಾಜ ಬೊಮ್ಮಾಯಿ ಕುಟುಂಬದ ಸದಸ್ಯರು ಹಾಗೂ ಅನೇಕ ಗಣ್ಯರು ಉಪಸ್ಥಿತರಿದ್ದರು.
PublicNext
21/02/2022 09:17 pm