ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾಂಗ್ರೆಸ್ ನಾಯಕಿಯಿಂದ ರಾಮಮಂದಿರ ನಿರ್ಮಾಣಕ್ಕೆ 51 ಲಕ್ಷ ದೇಣಿಗೆ!

ಲಕ್ನೋ: ಉತ್ತರ ಪ್ರದೇಶದ ಅಯೋಧ್ಯೆಯ ರಾಮ ಜನ್ಮಭೂಮಿಯಲ್ಲಿ ರಾಮ ಮಂದಿರ ನಿರ್ಮಾಣವಾಗುತ್ತಿದೆ. ಮಂದಿರ ನಿರ್ಮಾಣಕ್ಕೆ ದೇಶದೆಲ್ಲೇಡೆ ದೇಣಿಗೆ ಸಂಗ್ರಹ ಕಾರ್ಯ ಭರದಿಂದ ಸಾಗುತ್ತಿದೆ.

ಜನಸಾಮಾನ್ಯರಿಂದ ಹಿಡಿದು ಸೆಲೆಬ್ರೇಟಿಗಳವರೆಗೂ ತಮ್ಮ ಕೈಲಾದ ದೇಣಿಗೆ ನೀಡುತ್ತಿದ್ದಾರೆ. ಇದರ ಮಧ್ಯೆ ಅತೀ ಹೆಚ್ಚು ದೇಣಿಗೆ ನೀಡುವವರು ಸುದ್ದಿಯಾಗುತ್ತಿದ್ದಾರೆ.ಇದೀಗ ಉತ್ತರ ಪ್ರದೇಶದ ರಾಯ್ ಬರೇಲಿ ಕಾಂಗ್ರೆಸ್ ಶಾಸಕಿ ಆದಿತಿ ಸಿಂಗ್ ಅವರು ರಾಮ ಮಂದಿರ ನಿರ್ಮಾಣಕ್ಕೆ 51 ಲಕ್ಷ ಹಣವನ್ನು ದೇಣಿಗೆಯಾಗಿ ನೀಡಿ ಸುದ್ದಿಯಾಗಿದ್ದಾರೆ.

ಈ ಹಣವನ್ನು ಶ್ರೀ ರಾಮ್ ಜನ್ಮಭೂಮಿ ತೀರ್ಥ ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ಚಂಪತ್ ರಾಜ್ ಅವರಿಗೆ ರಾಮ ಮಂದಿರ ನಿರ್ಮಾಣ ಕಾರ್ಯಕ್ಕೆ ದೇಣಿಗೆಯಾಗಿ ನೀಡುವುದಾಗಿ ಅವರು ತಿಳಿಸಿದ್ದಾರೆ.ಗೋರಕ್ಷ್ ಪೀಠದ ಪೀಠಾಧೀಶ್ವರಾಗಿರುವ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ರಾಮ ದೇವಾಲಯ ನಿರ್ಮಾಣಕ್ಕಾಗಿ 1.01 ಕೋಟಿ ರೂ. ಚೆಕ್ ಅನ್ನು ಚಂಪತ್ ರಾಯ್ ಅವರಿಗೆ ಹಸ್ತಾಂತರಿಸಿದ್ದರು. ಇನ್ನು ದೇಣಿಗೆ ಸಂಗ್ರಹಿಸುವ ಅಭಿಯಾನ ಫೆಬ್ರವರಿ 27ರ ವರೆಗೆ ನಡೆಯಲಿದೆ.

Edited By : Nirmala Aralikatti
PublicNext

PublicNext

10/02/2021 11:02 am

Cinque Terre

73.51 K

Cinque Terre

6

ಸಂಬಂಧಿತ ಸುದ್ದಿ