ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹೋಳಿ ಹಬ್ಬ : PM,CM ಸೇರಿ ಗಣ್ಯರಿಂದ ಶುಭಾಶಯ

ನವದೆಹಲಿ: ರಂಗಿನ ಹಬ್ಬ ಹೋಳಿಗೆ ಪ್ರಧಾನಿ ಮೋದಿ, ರಾಜ್ಯದ ಸಿಎಂ ಬಸವರಾಜ ಬೊಮ್ಮಾಯಿ ಸೇರಿದಂತೆ ಅನೇಕ ಗಣ್ಯರು ದೇಶದ ಜನತೆಗೆ ಶುಭ ಕೋರಿದ್ದಾರೆ.

ಈ ಕುರಿತು ಟ್ವೀಟ್ ಮಾಡಿದ ಪ್ರಧಾನಿ ಮೋದಿ ಹೋಳಿ ಹಬ್ಬವು ದೇಶದ ಎಲ್ಲರ ಬಾಳಿನಲ್ಲಿ ಸಂತಸ ಮೂಡಿಬರುವಂತೆ ಮಾಡಲಿ ಎಂದು ಪ್ರಧಾನಿ ನರೇಂದ್ರ ಮೋದಿ ಶುಭ ಹಾರೈಸಿದ್ದಾರೆ.

‘ಎಲ್ಲರಿಗೂ ಹೋಳಿ ಹಬ್ಬದ ಶುಭಾಶಯಗಳು. ಪ್ರೀತಿ, ವಾತ್ಸಲ್ಯ ಮತ್ತು ಭ್ರಾತೃತ್ವದ ಸಂಕೇತವಾದ ಈ ಬಣ್ಣದ ಹಬ್ಬವು ನಿಮ್ಮೆಲ್ಲರ ಜೀವನದಲ್ಲಿ ಸಂತಸದ ಬಣ್ಣ ಮೂಡಿಸಲಿ’ ಎಂದು ಅವರು ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

ಕೇಂದ್ರ ಸಚಿವರಾದ ಅಮಿತ್ ಶಾ, ರಾಜನಾಥ್ ಸಿಂಗ್, ಮುಖ್ತಾರ್ ಅಬ್ಬಾಸ್ ನಖ್ವಿ ಸೇರಿದಂತೆ ಅನೇಕ ಗಣ್ಯರು ಹಬ್ಬದ ಸಂದರ್ಭದಲ್ಲಿ ದೇಶದ ಜನತೆಗೆ ಶುಭ ಹಾರೈಸಿದ್ದಾರೆ.

ನಾಡಿನ ಜನರಿಗೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಹೋಳಿ ಹಬ್ಬದ ಶುಬಾಶಯ ಕೋರಿದ್ಧಾರೆ.

Edited By : Nirmala Aralikatti
PublicNext

PublicNext

18/03/2022 10:02 am

Cinque Terre

64.84 K

Cinque Terre

0

ಸಂಬಂಧಿತ ಸುದ್ದಿ