ಮುಂಬೈ: ಮುಂಬೈನಲ್ಲಿ ನಿನ್ನೆ (ಭಾನುವಾರ) 80ನೇ ವಾರ್ಷಿಕ 'ಮಾಸ್ಟರ್ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ' ಪ್ರದಾನ ಸಮಾರಂಭ ನಡೆಯಿತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ ಪ್ರಧಾನಿ ನರೇಂದ್ರ ಮೋದಿ ಅವರು, ದೇಶ ಮತ್ತು ಸಮಾಜಕ್ಕೆ ಸಲ್ಲಿಸಿದ ನಿಸ್ವಾರ್ಥ ಸೇವೆಗಾಗಿ ಮೊದಲ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದರು.
ಈ ವರ್ಷದ ಪ್ರಾರಂಭದಲ್ಲಿ ಮುಂಬೈನಲ್ಲಿ ತಮ್ಮ 92ನೇ ವಯಸ್ಸಿನಲ್ಲಿ ನಿಧನರಾದ ಭಾರತ ರತ್ನ ಲತಾ ಮಂಗೇಶ್ಕರ್ ಅವರ ಸ್ಮರಣೆ ಹಾಗೂ ಗೌರವಾರ್ಥವಾಗಿ ಈ ಪ್ರಶಸ್ತಿಯನ್ನು ಸ್ಥಾಪಿಸಲಾಗಿದೆ.
ಈ ವೇಳೆ ಮಾತನಾಡಿದ ಪ್ರಧಾನಿ ಮೋದಿ, 'ನನಗೆ ಲತಾ ದೀದಿ ಸಹೋದರಿ ಇದ್ದಂತೆ. ನಾನು ಯಾವಾಗಲೂ ಅವರಿಂದ ಅಪಾರ ಪ್ರೀತಿ ಗಳಿಸಿದ್ದೇನೆ. ಹಾಗಾಗಿ ಈ ಪ್ರಶಸ್ತಿಯನ್ನು ಒಪ್ಪಿಕೊಳ್ಳದಿರಲು ಸಾಧ್ಯವೇ ಇಲ್ಲ. ಈ ಪ್ರಶಸ್ತಿಯನ್ನು ಎಲ್ಲಾ ದೇಶವಾಸಿಗಳಿಗೆ ಅರ್ಪಿಸುತ್ತೇನೆ ಎಂದು ಹೇಳಿದರು.
ಲತಾ ಮಂಗೇಶ್ಕರ್ ಅವರು ಯಾವಾಗಲೂ ಬಲಿಷ್ಠ ಮತ್ತು ಸಮೃದ್ಧ ಭಾರತದ ಕನಸು ಕಾಣುತ್ತಿದ್ದರು. ರಾಷ್ಟ್ರ ನಿರ್ಮಾಣಕ್ಕೆ ತಮ್ಮದೇ ಕೊಡುಗೆ ನೀಡಿದ್ದಾರೆ ಎಂದು ಹೇಳಿದರು.
PublicNext
25/04/2022 07:25 am